ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ, ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ, ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
Facebook
Twitter
LinkedIn
WhatsApp

ಬೆಂಗಳೂರಿನ ಕಾಲ್ತುಳಿತ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸಿತು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಚಾರದ ಗೀಳಿಗೆ ಬಿದ್ದ ಕಾಂಗ್ರೆಸ್ ನಾಯಕರು 11 ಜೀವಗಳನ್ನು ಬಲಿತೆಗೆದುಕೊಂಡಿದ್ದಾರೆ ಎಂದು ದೂರಿದರು. ನೈತಿಕ ಹೊಣೆ ಹೊತ್ತು ಈ ಎಲ್ಲಾ ನಾಯಕರು ರಾಜೀನಾಮೆ ನೀಡುವಂತೆ ಆಗ್ರಹಿಸಿದರು.

News By: Raghu Shikari-7411515737