ಬೆಂಗಳೂರು: ರಾಜ್ಯದ ಪ್ರತಿಯೊಂದು ಶಾಲೆಗಳಲ್ಲಿ ಪರಿಸರ, ಹವಾಮಾನ ವೈಪರಿತ್ಯ ಜಾಗತಿಕ ಕ್ಲಬ್‌ಗಳನ್ನು ಕಡ್ಡಾಯವಾಗಿ ರಚನೆ ಮಾಡಬೇಕು ಎಂಬ ಆದೇಶ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಶ್ವ ಪರಿಸರ ದಿನ ೨೦೨೫ರ ಅಂಗವಾಗಿ ಆಯೋಜಿಸಿದ್ದ ಪರಿಸರ ನಡಿಗೆ ಕಾರ್ಯಕ್ರಮಕ್ಕೆ, ವಿಧಾನ ಸೌಧದ ಮುಂಭಾಗದಲ್ಲಿ ಚಾಲನೆ ನೀಡಿದ ಅವರು, ಕನಿಷ್ಠ 25 ವಿದ್ಯಾರ್ಥಿಗಳನ್ನು ಒಳಗೊಂಡಂತೆ ಜಾಗೃತಿ ಕ್ಲಬ್‌ಗಳನ್ನು ರಚನೆ ಮಾಡಬೇಕೆಂದು ಹೇಳಿದ್ದಾರೆ.

ಪ್ರತಿಯೊಬ್ಬ ವಿದ್ಯಾರ್ಥಿ ಸಸಿಯನ್ನು ದತ್ತು ಪಡೆಯಬೇಕೆಂದು ಸಲಹೆ ನೀಡಿದ್ದಾರೆ. ಹಸಿರು ಮತ್ತು ಸ್ವಚ್ಛತೆ ತಮ್ಮ ಸರ್ಕಾರದ ಧ್ಯೇಯ ಎಂದು ಪ್ರತಿಪಾದಿಸಿದ್ದಾರೆ.
News By: Raghu Shikari-7411515737