ದೇಶದಲ್ಲಿ ವೈದ್ಯಕೀಯ ಸೀಟುಗಳ ಸಂಖ್ಯೆ 1 ಲಕ್ಷದ 18 ಸಾವಿರಕ್ಕೆ ಹೆಚ್ಚಳ – ಕೇಂದ್ರ ಗೃಹ ಸಚಿವ ಅಮಿತ್ ಶಾ

ದೇಶದಲ್ಲಿ ವೈದ್ಯಕೀಯ ಸೀಟುಗಳ ಸಂಖ್ಯೆ 1 ಲಕ್ಷದ 18 ಸಾವಿರಕ್ಕೆ ಹೆಚ್ಚಳ – ಕೇಂದ್ರ ಗೃಹ ಸಚಿವ ಅಮಿತ್ ಶಾ
Facebook
Twitter
LinkedIn
WhatsApp

ಬೆಂಗಳೂರು: ಬಡತನದೊಂದಿಗೆ ಆರೋಗ್ಯದ ವೆಚ್ಚವೂ ದೇಶದ ಜನರನ್ನು ಕಾಡುತ್ತಿದ್ದು ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಅಯುಷ್ಮಾನ್ ಭಾರತ್ ಜನೌಷಧಿ ಕೇಂದ್ರಗಳ ಮೂಲಕ ಜನರ ಕಷ್ಟ ಪರಿಹಾರಕ್ಕೆ ಸ್ಪಂದಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜು ಹಾಗೂ ಅಸ್ಪತ್ರೆ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ದೇಶದಲ್ಲಿ 387ರಷ್ಟಿದ್ದ ವೈದ್ಯಕೀಯ ಕಾಲೇಜುಗಳ ಸಂಖ್ಯೆ 780ಕ್ಕೆ ಏರಿದ್ದು, 51ಸಾವಿರ ಇದ್ದ ವೈದ್ಯಕೀಯ ಸೀಟುಗಳು 1 ಲಕ್ಷ 18 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಇದೇ ವೇಳೆ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಪ್ರತಿ ಜಿಲ್ಲೆಯಲ್ಲಿ ಒಂದು ವೈದ್ಯಕೀಯ ಕಾಲೇಜು, ಕ್ಯಾನ್ಸರ್ ಚಿಕಿತ್ಸಾ ಕೇಂದ್ರ, ಹಾಗೂ ಅಪಘಾತ ಚಿಕಿತ್ಸಾ ಕೇಂದ್ರ ಆರಂಭಿಸುವುದಾಗಿ ಘೋಷಿಸಿದ್ದಾರೆ.

News By: Raghu Shikari-7411515737