ಶಿಕಾರಿಪುರ: ಪಟ್ಟಣದ ತಾಲೂಕು ಕಚೇರಿಯರು ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಎನ್ ಡಿಎ ಸರ್ಕಾರದ ವಿರುದ್ಧ ಯುವ ಕಾಂಗ್ರಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಸಿಲ್ದಾರ್ ಮನವಿ ಸಲ್ಲಿಸಲಾಗಿದೆ.
ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಂಜುನಾಥ್ ಮಾತನಾಡಿ ರೈತರ ಬೆಳೆಗಳಿಗೆ ವಿತರಿಸುವ ರಾಸಾಯನಿಕ ರಸಗೊಬ್ಬರಗಳ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಳ ಮಾಡಿದ್ದು ಯುವ ಕಾಂಗ್ರೆಸ್ ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದರು.

ಕೇಂದ್ರ ಸರ್ಕಾರ ಅಚ್ಚದಿನ್ ಆಯೇಗಾ ಎಂದು ಹೇಳಿಕೊಂಡು ರೈತರಿಗೆ ಮೋಸ ಮಾಡುತ್ತಿದೆ ಕಳೆದ ವರ್ಷ ಇಪ್ಕೊ ರಸಗೊಬ್ಬರದ ಬೆಲೆ 1250 ರೋ ಗಳಿದ್ದು ಈ ವರ್ಷ 1650ರೂಗಳಿಗೆ ಹೆಚ್ಚಿಸಲಾಗಿದೆ. ಇದೆ ರೀತಿ ರೈತರಿಗೆ ಅಗತ್ಯವಿರುವ ಎಲ್ಲಾ ರಸಗೊಬ್ಬರಗಳ ಬೆಲೆ ಏರಿಕೆ ಮಾಡುತ್ತಿದೆ ಎಂದರು.
ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ್ ಮಾತನಾಡಿ
ಬಿಜೆಪಿ ಸರ್ಕಾರ ಕಿಸನ್ ಸನ್ಮಾನ್ ಹೆಸರಿನಲ್ಲಿ 4 ಸಾವಿರ ನೀಡಿ ಹಿಂಬಾಗಿಲಿಂದ ಗೊಬ್ಬರ, ಔಷಧಿ, ಬಿತ್ತನೆ ಬೀಜಗಳ ಬೆಲೆ ಏರಿಕೆ ಮಾಡಿದ್ದಾರೆ.ಕೇಂದ್ರ ಸರ್ಕಾರ ರಸಗೊಬ್ಬರಗಳ ಬೆಲೆಗಳನ್ನು ಇಳಿಕೆ ಮಾಡದೇ ಇದ್ದಾರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸಲಾಗುವುದು ಎಂದರು.
ಈ ಸಂದರ್ಬದಲ್ಲಿ ಮಾಜಿ ಕಾಡಾ ಅಧ್ಯಕ್ಷರಾದ ನಗರದ ಮಹದೇವಪ್ಪ, ಮುಖಂಡರಾದ ಭಂಡಾರಿ ಮಾಲತೇಶ್, ಚರಣ್ ,ಸಂದೀಪ್ ಪಚ್ಚಿ, ಸುನೀಲ್, ಶಿವು ಇದ್ದರು.
News By: Raghu Shikari-7411515737