ಬಾಗಲಕೋಟೆ:, ಪಿಎಸ್‌ಐ ಹಗರಣ ನಂತರಐದು ವರ್ಷಗಳಿಂದ ಇಲ್ಲಿವರೆಗೂ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿರಲಿಲ್ಲ. ಈಗ ಶೀಘ್ರದಲ್ಲಿಯೇ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ಬಾಗಲಕೋಟೆ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಐದು ವರ್ಷಗಳಿಂದ ಯಾವುದೇ ನೇಮಕಾತಿಗಳು ಆಗಿಲ್ಲ. ಒಂದು ಸಾವಿರ ಪಿಎಸ್ ಹುದ್ದೆಗಳು ಖಾಲಿ ಇದ್ದು ಈಗಾಗಲೇ 500 ಜನರ ನೇಮಕಾತಿ ಪ್ರಕ್ರಿಯೆಯು ನಡೆದಿದ್ದು ಕೆಲವರು ತರಬೇತಿಯಲ್ಲಿ ದ್ದಾರೆ. ಇಲಾಖೆಯಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹಂತ ಹಂತವಾಗಿ ಕ್ರಮವನ್ನು ಕೈಗೊಳ್ಳುತ್ತೇವೆ ಎಂದರು.
ನೂತನ ಪೊಲೀಸ್ ಠಾಣೆಗಳನ್ನು ನಿರ್ಮಿಸಲು ಮುಂದಿನ ಬಜೆಟ್‌ನಲ್ಲಿ ಅನುದಾನವನ್ನು ಮೀಸಲಿಡುತ್ತೇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದು ಯಾವುದೇ ತೊಂದರೆ ಆಗಿಲ್ಲ ಎಂದರು.
News By: Raghu Shikari-7411515737