ತುರ್ತು ಪರಿಸ್ಥಿತಿ ಅಧಿಕಾರಕ್ಕಾಗಿ ಪವಿತ್ರ ಸಂವಿಧಾನವನ್ನೇ ಬಲಿ ಕೊಟ್ಟ ದಿನಗಳು- ಬಿ.ಎಸ್ ಯಡಿಯೂರಪ್ಪ

ತುರ್ತು ಪರಿಸ್ಥಿತಿ ಅಧಿಕಾರಕ್ಕಾಗಿ ಪವಿತ್ರ ಸಂವಿಧಾನವನ್ನೇ ಬಲಿ ಕೊಟ್ಟ ದಿನಗಳು- ಬಿ.ಎಸ್ ಯಡಿಯೂರಪ್ಪ
Facebook
Twitter
LinkedIn
WhatsApp

ಬೆಂಗಳೂರು: ಪ್ರಧಾನಿ ಇಂದಿರಾ ಗಾಂಧಿಯವರು 1975ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದರು. ಕೇವಲ ತಮ್ಮ ಅಧಿಕಾರಕ್ಕಾಗಿ ನಮ್ಮ ಪವಿತ್ರ ಸಂವಿಧಾನವನ್ನೇ ಆಗ ಬಲಿ ಕೊಡಲಾಗಿತ್ತು ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

“ಸಿಟಿಜನ್ ಫಾರ್ ಸೋಷಿಯಲ್ ಜಸ್ಟೀಸ್ ಬೆಂಗಳೂರು” ಇವರ ವತಿಯಿಂದ ಇಂದು ಟೌನ್ ಹಾಲ್ ನಲ್ಲಿ “1975ರ ತುರ್ತು ಪರಿಸ್ಥಿತಿ 50ನೇ ವರ್ಷ-ಕರಾಳ ದಿನಗಳು” ಎನ್ನುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಗ ಪ್ರಜೆಗಳ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳಲಾಗಿತ್ತು ಎಂದು ವಿವರಿಸಿದರು. ತಮ್ಮ ನಿರಂಕುಶ ಅಧಿಕಾರಕ್ಕಾಗಿ ಸ್ವಾತಂತ್ರ್ಯದ ಧ್ವನಿಗಳ ಕೊರಳನ್ನು ಹಿಸುಕಿ ಪತ್ರಿಕಾ ಸ್ವಾತಂತ್ರ್ಯ, ನ್ಯಾಯಾಂಗದ ಸ್ವಾಯತ್ತತೆ, ಸಾರ್ವಜನಿಕ ಹಕ್ಕುಗಳನ್ನು ಕಸಿದುಕೊಳ್ಳಲಾಗಿತ್ತು ಎಂದು ತಿಳಿಸಿದರು.

ಅಧಿಕಾರ ಲಾಲಸೆಯ ಹಿಟ್ಲರ್‍ಶಾಹಿ ದುರಾಡಳಿತವು ಇಂದಿಗೂ ಆಕ್ರೋಶದ ಕಿಚ್ಚು ಹಚ್ಚುವಂತಿದೆ. ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ ವ್ಯವಸ್ಥೆಗಳನ್ನು ತಮ್ಮ ಕಪಿಮುಷ್ಟಿಯಲ್ಲಿ ಇಟ್ಟುಕೊಂಡು ಅಧಿಕಾರದಲ್ಲಿ ಉಳಿಯಬೇಕೆಂಬ ಒಂದೇ ಕಾರಣವು ತುರ್ತು ಪರಿಸ್ಥಿತಿ ಹೇರುವಿಕೆಯ ಹಿಂದೆ ಇತ್ತು ಎಂದು ಹೇಳಿದರು.

ವಾಕ್ ಸ್ವಾತಂತ್ರ್ಯ, ರಾಜಕೀಯ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಯಿತು. ಪತ್ರಿಕಾ ಸ್ವಾತಂತ್ರ್ಯಕ್ಕೆ ಸಂಪೂರ್ಣ ಅಂಕುಶ ಹಾಕಲಾಗಿತ್ತು. ಪ್ರಜಾಪ್ರಭುತ್ವದ ಕತ್ತು ಹಿಸುಕಿ ಅಟ್ಟಹಾಸ ಮೆರೆಯಲಾಯಿತು.ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕಾಂಗ್ರೆಸ್ ಪಕ್ಷವು ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಅಧಿಕಾರಕ್ಕಾಗಿ ಹೀಗೆ ಮಾಡಿತ್ತು. ಇದು ನಿಜವಲ್ಲದಿದ್ದರೆ, ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ನೀಡಿದ ಶ್ರೇಷ್ಠ ಸಂವಿಧಾನದ ಆಶೋತ್ತರಗಳ ಕತ್ತು ಹಿಸುಕಿ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರುವ ಪ್ರಮಾದವನ್ನು ಕಾಂಗ್ರೆಸ್ ಮಾಡುತ್ತಿರಲಿಲ್ಲ ಎಂದು ಹೇಳಿದರು.

News by: Raghu Shikari-7411515737