ಆಡಳಿತದಲ್ಲಿ ಎಲ್ಲಾ ಇಲಾಖೆಗಳು ಕಡ್ಡಾಯವಾಗಿ ಕನ್ನಡ ಬಳಸುವಂತೆ ಸರ್ಕಾರ ಮಹತ್ವದ ಆದೇಶ

ಆಡಳಿತದಲ್ಲಿ ಎಲ್ಲಾ ಇಲಾಖೆಗಳು ಕಡ್ಡಾಯವಾಗಿ ಕನ್ನಡ ಬಳಸುವಂತೆ ಸರ್ಕಾರ ಮಹತ್ವದ ಆದೇಶ
Facebook
Twitter
LinkedIn
WhatsApp

ಬೆಂಗಳೂರು: ಆಡಳಿತದಲ್ಲಿ ಕನ್ನಡ ಕಡ್ಡಾಯಗೊಳಿಸಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ. ಕನ್ನಡದಲ್ಲಿ ಬರುವ ಅರ್ಜಿ ಪತ್ರಗಳಿಗೆ ಕನ್ನಡದಲ್ಲಿ ಉತ್ತರಿಸಿ ನಾಮ ಫಲಕ ಕನ್ನಡದಲ್ಲೇ ಪ್ರದರ್ಶಿಸಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಹತ್ವದ ಆದೇಶ ಹೊರಡಿಸಿದ್ದಾರೆ.

ವಿಧಾನ ಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನಸೆಳೆಯುವ ಸೂಚನೆ ಇತ್ಯಾದಿಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಸಲ್ಲಿಸಬೇಕು. ನೇಮಕಾತಿ, ವರ್ಗಾವಣೆ ಮತ್ತು ರಜೆ ಮಂಜೂರಾತಿ ಇತರ ಎಲ್ಲಾ ಸರ್ಕಾರದ ಆದೇಶಗಳನ್ನು ಕನ್ನಡದಲ್ಲಿ ಹೊರಡಿಸಲು ಸ್ಪಷ್ಟ ಸೂಚನೆ ನೀಡಿದ್ದಾರೆ.

ಕಚೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ ನಮೂನೆ, ದಾಖಲೆ ಪುಸ್ತಕ ಮುಂತಾದವುಗಳನ್ನು ಕನ್ನಡದಲ್ಲಿ ಭರ್ತಿ ಮಾಡಬೇಕು. ಆಂತರಿಕ ಪತ್ರ ವ್ಯವಹಾರ, ಕಡತದ ಟಿಪ್ಪಣಿ ಕನ್ನಡದಲ್ಲಿಯೇ ಇರಬೇಕು. ಸಭಾ ಸೂಚನೆ, ಕಾರ್ಯಸೂಚಿ, ಸಂಕ್ಷಿಪ್ತ ಟಿಪ್ಪಣಿ ಹಾಗೂ ನಡಾವಳಿಗಳನ್ನು ಕನ್ನಡದಲ್ಲಿ ತಯಾರಿಸಿರಬೇಕು.

ಈ ಮೂಲಕ ಸರ್ಕಾರದ ಭಾಷಾ ನೀತಿಯನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರಬೇಕು ಎಂದು ನಿರ್ದೇಶನ ನೀಡಿದ್ದಾರೆ. ಕೇಂದ್ರ ಸರ್ಕಾರ, ಹೊರ ರಾಜ್ಯಗಳು ಮತ್ತು ನ್ಯಾಯಾಲಯಗಳ ಪತ್ರ ವ್ಯವಹಾರಗಳನ್ನು ಹೊರತುಪಡಿಸಿ, ಉಳಿದೆಲ್ಲಾ ಪತ್ರ ವ್ಯವಹಾರಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಇರುವಂತೆ ಸೂಚಿಸಿದ್ದಾರೆ.

News by: Raghu Shikari-7411515737