ಶಿವಮೊಗ್ಗ : ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿಗೆ ಮರುವಿನ್ಯಾಸಗೊಳಿಸಿದ ಹವಾಮಾನಾಧರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ, ಕಾಳುಮೆಣಸು, ಮಾವು ಮತ್ತು ಶುಂಠಿ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಿದೆ.

ವಿಮಾ ಕಂತಿನ ವಿವರ: ಅಡಿಕೆ ಒಂದು ಎಕರೆಗೆ -ರೂ. 2560/-, ಮಾವು – ಒಂದು ಎಕರೆಗೆ -ರೂ. 3200/-, ಕಾಳುಮೆಣಸು- ಒಂದು ಎಕರೆಗೆ -ರೂ. 1692/- ಮತ್ತು ಶುಂಠಿ ಒಂದು ಎಕರೆಗೆ -ರೂ. 2600/-.
ರೈತರು ಪ್ರಸಕ್ತ ಸಾಲಿನ ಪಹಣಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ಸಮೀಪದ ಬ್ಯಾಂಕ್/ಸಾರ್ವಜನಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಿ ಜು 31 ರೊಳಗಾಗಿ ವಿಮೆ ಕಂತನ್ನು ಪಾವತಿಸಿ, ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಶಿಕಾರಿಪುರ ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸುವುದು.
News By: Raghu Shikari-7411515737