ಬೆಂಗಳೂರು: ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಬಿಜೆಪಿ ಹಗಲುಗನಸು ಕಾಣುತ್ತಿದೆ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ ಎಂದು ವಂಗ್ಯವಾಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಏನು ಮಾಡಿದ್ದಾರೆ.
ಎಚ್ ಡಿ ಕುಮಾರಸ್ವಾಮಿಯವರು ಒಂದು ವರ್ಷ ಎರಡು ತಿಂಗಳು ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರದಲ್ಲಿದ್ದರು. ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
News By: Raghu Shikari-7411515737