ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ – ಬಿ.ವೈ. ವಿಜಯೇಂದ್ರ

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ – ಬಿ.ವೈ. ವಿಜಯೇಂದ್ರ
Facebook
Twitter
LinkedIn
WhatsApp

ಶಿಕಾರಿಪುರ : ಕೇಂದ್ರ ಮತ್ತು ರಾಜ್ಯ ಸರ್ಕಾರದ ಶೇಕಡ 50:50 ರ ಅನುದಾನದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಶಿಕಾರಿಪುರ ತಾಲ್ಲೂಕು ಅಂಜನಾಪುರ ಡ್ಯಾಮ್ ನಿಂದ 199 ಜನವಸತಿ ಪ್ರದೇಶಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ವಿಳಂಬ ಮಾಡದೇ ನಿಗಧಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರುಗಳಿಗೆ ಶುದ್ಧವಾದ ಕುಡಿಯುವ ನೀರನ್ನು ಪೂರೈಸಲು ಅಗತ್ಯ ಕ್ರಮ ವಹಿಸಬೇಕು ಎಂದು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು.

ಇಂದು ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರುಗಳ ಸಭೆ ಕರೆದು ಈ ಯೋಜನೆಯ ಅನುಷ್ಟಾನದಲ್ಲಿ ಈಗಾಗಲೇ ಸಾಕಷ್ಟು ವಿಳಂಬವಾಗಿದ್ದು, ಕಾಮಗಾರಿಯ ವೇಗವನ್ನು ಚುರುಕುಗೊಳಿಸುವಂತೆ ಸೂಚಿಸಿದರು.


ಅಂಜನಾಪುರ ಡ್ಯಾಮ್ ನಿಂದ 199 ಜನವಸತಿ ಪ್ರದೇಶಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮಾರ್ಚ್-2023 ರಲ್ಲಿ ಗುತ್ತಿಗೆ ಕರಾರಿಗೆ ಒಪ್ಪಂದವಾಗಿದ್ದು, ಸೆಪ್ಟೆಂಬರ್-2024 ರೊಳಗೆ ಪೂರ್ಣಗೊಳಿಸಬೇಕಿದ್ದು, ಕೆಲವು ತಾಂತ್ರಿಕ ಕಾರಣಗಳಿಂದ ಮತ್ತು ಅರಣ್ಯ ಪ್ರದೇಶ ಬಿಡುಗಡೆ ಸಂಬಂಧ ಕಾಮಗಾರಿಯನ್ನು ನಿರ್ವಹಿಸಲು ಅಡಚಣೆಯಾಗಿದ್ದು, ಪ್ರಗತಿಯಲ್ಲಿರುವ ಓ.ಹೆಚ್.ಟಿ ಟ್ಯಾಂಕ್ ಗಳನ್ನು ಒಂದು ತಿಂಗಳೊಳಗಾಗಿ ಪೂರ್ಣಗೊಳಿಸುವಂತೆ, ನೀರಿನ ಸಂಸ್ಕರಣಾ ಘಟಕಗಳನ್ನು 2 ತಿಂಗಳೊಳಗೆ ಪೂರ್ಣಗೊಳಿಸುವಂತೆ ಒಟ್ಟಾರೆಯಾಗಿ ಕಾಮಗಾರಿಯನ್ನು ಡಿಸೆಂಬರ್-2025 ರೊಳಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಶುದ್ಧವಾದ ಕುಡಿಯುವ ನೀರನ್ನು ಒದಗಿಸಲು ಅಂತಿಮ ಗಡುವನ್ನು ಶಾಸಕರು ನೀಡಿದರು.

ಅರಣ್ಯ ಪ್ರದೇಶದಲ್ಲಿ ಬರುವ ಜಾಗವನ್ನು ತ್ವರಿತ ಗತಿಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ನಿಯಮಾನುಸಾರ ನಿರಾಕ್ಷೇಪಣಾ ಪತ್ರವನ್ನು ನೀಡುವಂತೆ ಸಾಗರ ಉಪ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚಿಸಿದರು.


ಸಭೆಯಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್, ಸಾಗರ ಉಪ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್, ದಿಶಾ ಕಮಿಟಿಯ ಸದಸ್ಯರಾದ ಕೆ ಎಸ್ ಗುರುಮೂರ್ತಿ, ಗ್ರಾ.ಕು.ನೀ.ಸ & ನೈ.ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರೂಪ್ಲಾನಾಯ್ಕ, ಕೆ.ಎಲ್.ಎಸ್.ಆರ್ ಇನ್ ಫ್ರಾಟೆಕ್ ಲಿಮಿಟೆಡ್ ನ ನಿರ್ದೇಶಕರಾದ ಶ್ರೀನಿವಾಸ, ನಿಪ್ಪಾನ್ ಕೋಯಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ನರೇಂದ್ರ ಹಾಗೂ ಇತರೆ ಅಧಿಕಾರಿಗಳು ಇದ್ದರು.

News By: Raghu Shiakri-7411515737