ಪಟ್ಟಣದ ಬಿಇಓ ಕಚೇರಿಯದರು ತಾಲೂಕು ಎನ್ ಎಸ್ ಯು ಐ ಹಾಗೂ ದಲಿತ ಸಂಘರ್ಷ ಸಮಿತಿ ವಿವಿಧ ಸಂಘ ಸಂಸ್ಥೆಗಳ ಸಹಾಯಕದೊಂದಿಗೆ ಖಾಸಗಿ ಅನುದಾನಿತ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ್ ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದಿಸಬೇಕು ಎಂದು ಆದೇಶವಿದ್ದರೂ ಕೆಲ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದಿಸುತ್ತಿಲ್ಲ ಈ ವಿಷಯ ತಮ್ಮ ಗಮನಕ್ಕೆ ಬಂದಿದೆ ಕೂಡಲೇ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಕಡ್ಡಾಯವಾಗಿ ಎಲ್ಲಾ ಶಾಲೆಗಳಲ್ಲೂ ಸಂವಿಧಾನ ಪೀಠಿಕೆಯನ್ನು ಓದಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಭಂಡಾರಿ ಮಾಲತೇಶ್, ಪುರಸಭಾ ಸದಸ್ಯರಾದ ಉಳ್ಳಿ ದರ್ಶನ್, ಡಿಎಸ್ಎಸ್ ಸಂಚಾಲಕ ಜಗದೀಶ್ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷರಾದ ಚರಣ್ ರಾಜ್, ಎನ್ ಎಸ್ ಯು ಐ ಅಧ್ಯಕ್ಷ ಸೈಯದ್ ಹುಸೇನ್ ಸುನಿಲ್,ಅನಿಲ್, ಬಸವರಾಜ್,ಚಂದ್ರು ಇದ್ದರು.
News By: Raghu Shikari-7411515737