ಶಿವಮೊಗ್ಗ: ಕರ್ನಾಟಕದ ವಿಕಾಸಕ್ಕೆ ಮುಂದಿನ 5 ವರ್ಷಗಳಲ್ಲಿ 5 ಲಕ್ಷ ಕೋಟಿ ರೂಪಾಯಿ ಮೌಲ್ಯದ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

6 ದಶಕಗಳ ಕನಸಾಗಿದ್ದ ಶಿವಮೊಗ್ಗದ ಸಿಗಂದೂರು ಭಾಗದ 40 ಕ್ಕೂ ಹೆಚ್ಚು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಅಂಬಲಗೋಡು- ಕಳಸವಳ್ಳಿ- ಸಿಗಂಧೂರು ಸೇತುವೆಯನ್ನು ಇಂದು ಉದ್ಘಾಟಿಸಿ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಸೇತುವೆಯಾಗಿದ್ದು, ಇದರ ಹೆಸರನ್ನು ಸಿಗಂಧೂರು ಚೌಡೇಶ್ವರಿ ದೇವಿ ಸೇತುವೆ ಎಂದು ಪ್ರಕಟಿಸಿದರು.

ನಂತರ ಮಾತನಾಡಿದ ಅವರು, 10 ಸಾವಿರ ಕೋಟಿ ಮೊತ್ತದ ಬೆಳಗಾವಿ- ಹುನಗುಂದ- ರಾಯಚೂರು ಚತುಷ್ಪಥ ಕಾಮಗಾರಿ, ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯ ಸರ್ವಿಸ್ ರಸ್ತೆ, ಬೆಂಗಳೂರು-ಮಂಗಳೂರು ನಡುವಿನ ಶಿರಾಡಿ ಘಾಟ್ ಯೋಜನೆ, ಮೈಸೂರು-ಕೊಡಗು ರಾಷ್ಟ್ರೀಯ ಹೆದ್ದಾರಿ ಯೋಜನೆ ಸೇರಿದಂತೆ ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಲವು ಯೋಜನೆಗಳನ್ನು 2025 ರೊಳಗೆ ಪೂರ್ಣಗೊಳಿಸುವ ಭರವಸೆ ನೀಡಿದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ಮ್ಯಾನ್ ಆಫ್ ನ್ಯಾಷನಲ್ ಹೈವೇಸ್ ಎಂಬ ಹೆಸರು ಗಡ್ಕರಿಯವರಿಗೆ ಸೂಕ್ತ ಎಂದು ಬಣ್ಣಿಸಿದರು. ಇದೇ ವೇಳೆ ಸಿಗಂದೂರು ಸೇತುವೆಗಾಗಿ ನಡೆದ ಹೋರಾಟವನ್ನು ಅವರು ಸ್ಮರಿಸಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ, ಸ್ಥಳೀಯ ಶಾಸಕ ಬೇಳೂರು ಗೋಪಾಲಕೃಷ್ಣ ಸಚಿವ ಸತೀಶ್ ಜಾರಿಕೀಹೊಳೆ ಗೈರು ಆಗಿದ್ದು ಸಿಎಂ ಸಿದ್ದರಾಮಯ್ಯ ನಮಗೆ ತಡವಾಗಿ ಆಹ್ವಾನ ನೀಡಲಾಗಿದೆ ಎಂದು ಕೇಂದ್ರ ಸಚಿವ ನೀತಿನ್ ಗಡ್ಕರಿ ಪತ್ರ ಬರೆದಿದ್ದರು ಶಾಸಕ ಬೇಳೂರು ಗೋಪಾಲಕೃಷ್ಣ ಸಂಸದರು ಈ ಕಾರ್ಯಕ್ರಮವನ್ನು ಬಿಜೆಪಿ ಕಾರ್ಯಕ್ರಮದ ರೀತಿಯಲ್ಲಿ ನಡೆಸುತ್ತಿದ್ದಾರೆ ನಮಗೆ ಆಹ್ವಾನ ಬಂದಿಲ್ಲ ಎಂದು ಆರೋಪಿಸಿದ್ದರು ಪಕ್ಷಗಳ ಆರೋಪ ಪ್ರತ್ಯಾರೋಪಗಳ ನಡುವೆ ಇಂದ ಸೇತುವೆ ಉದ್ಘಾಟಿಸಲಾಗಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ,ಶಾಸಕ ಚೆನ್ನಬಸಪ್ಪ,ಗುರುರಾಜ್ ಗಂಟಿಹೊಳೆ, ಸೇರಿದಂತೆ ಹಲವರು ಉಪಸ್ಥಿತರಿದ್ದರು.
News By: Raghu Shiakri-7411515737