ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ಬಳಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಸಾಗರದಿಂದ ಶಿವಮೊಗ್ಗದ ಕಡೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಆನಂದಪುರದಿಂದ ಸಾಗರದ ಕಡೆ ತೆರಳುತ್ತಿದ್ದ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಹಲವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ.
ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆಗಿದ್ದು ಪೊಲೀಸರು ಸಂಚಾರ ತೆರವುಗೊಳಿಸುವಲ್ಲಿ ಕಾರ್ಯನಿರತರಾಗಿದ್ದಾರೆ.ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿದ್ದಾರೆ.