ಶಿಕಾರಿಪುರ ತಾಲೂಕಿನಲ್ಲಿ ಸುರಿಯುತ್ತಿರು ನಿರಂತರ ಮಳೆಯಿಂದಾಗಿ ದಿನಾಂಕ 26/7/2025 ರಂದು ಶಿಕಾರಿಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಡಿಪ್ಲೋಮ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಅತಿಯಾದ ಮಳೆಯಿಂದ ಶೀತ ವಾತಾವರಣ ಮಕ್ಕಳ ಆರೋಗ್ಯದ ದೃಷ್ಠಿಯಿಂದ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳು ಶಿಕಾರಿಪುರ ತಾಲ್ಲೂಕು ಅವರು ಘೋಷಿಸಿದ್ದಾರೆ.
ಇನ್ನೂ ಶಿವಮೊಗ್ಗ ತಾಲೂಕು, ಸಾಗರ, ಸೊರಬ, ಹೊಸನಗರ, ಭದ್ರಾವತಿ ತೀರ್ಥಹಳ್ಳಿ ತಾಲೂಕು ಕೇಂದ್ರಗಳಲ್ಲೂ ಆಯಾ ತಾಲೂಕು ತಹಶಿಲ್ದಾರ್ ಅವರು ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ