ಬಹು ನಿರೀಕ್ಷಿತ ಒಳ ಮೀಸಲಾತಿ ಡಾ.ನಾಗಮೋಹನದಾಸ್ ಆಯೋಗ ಸಿಎಂಗೆ ವರದಿ ಸಲ್ಲಿಕೆ..!

ಬಹು ನಿರೀಕ್ಷಿತ ಒಳ ಮೀಸಲಾತಿ ಡಾ.ನಾಗಮೋಹನದಾಸ್ ಆಯೋಗ ಸಿಎಂಗೆ ವರದಿ ಸಲ್ಲಿಕೆ..!
Facebook
Twitter
LinkedIn
WhatsApp


ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತು ಶಿಫಾರಸು ಮಾಡಲು ರಾಜ್ಯ ಸರ್ಕಾರ ರಚಿಸಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್‌ ನೇತೃತ್ವದ ಏಕಸದಸ್ಯ ಆಯೋಗವು ಶಿಫಾರಸುಗಳನ್ನು ಒಳಗೊಂಡ ತನ್ನ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಸಲ್ಲಿಸಿದೆ‌.

ಒಳಮೀಸಲಾತಿ ಬೇಕೆಂದು ನ್ಯಾಯಾಲಯಗಳ ಒಳಗೆ ಮತ್ತು ಹೊರಗೆ 30 ವರ್ಷಗಳ ಹೋರಾಟ ಅಂತಿಮವಾಗಿ ಸರ್ವೋಚ್ಚ ನ್ಯಾಯಾಲಯವು ದಿನಾಂಕ 01-08-2024 ರಂದು ದವಿಂದರ್‌ಸಿಂಗ್‌ ಪ್ರಕರಣದ ತೀರ್ಪಿನಲ್ಲಿ ಈ ರೀತಿ ಸ್ಪಷ್ಟಪಡಿಸಿತು ಉಪವರ್ಗೀಕರಣ ಮಾಡುವುದಕ್ಕೆ ಸಂವಿಧಾನದ ಅನುಚ್ಛೇದ 14 ರಲ್ಲಿ ಅವಕಾಶವಿದೆ. ಉಪವರ್ಗೀಕರಣ ಸಾಮಾಜಿಕ ನ್ಯಾಯದ ವಿಸ್ತರಣೆ ರಾಜ್ಯ ಸರ್ಕಾರಕ್ಕೆ ಒಳಮೀಸಲಾತಿ ನೀಡುವ ಅಧಿಕಾರವಿದೆ.

ಉಪವರ್ಗೀಕರಣ ಮಾಡಿದರೆ ಮೀಸಲಾತಿ ಅನುಭವಿಸುತ್ತಿರುವ ಯಾರನ್ನೂ ಹೊರಗಿಡುವುದಿಲ್ಲ. ಅಗತ್ಯ ದತ್ತಾಂಶ ಸಂಗ್ರಹಿಸಿ ಒಳಜಾತಿಗಳ ವರ್ಗೀಕರಣ ಮಾಡಬೇಕು.
ಜನವರಿ 2025 ರಂದು ಕರ್ನಾಟಕ ಸರ್ಕಾರ ರಾಜ್ಯದಲ್ಲಿರುವ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್ ರವರ ಅಧ್ಯಕ್ಷತೆಯಲ್ಲಿ ಆಯೋಗವನ್ನು ರಚಿಸಿತು.

ರಾಜ್ಯದಲ್ಲಿ ನಿಖರವಾದ ದತ್ತಾಂಶ ಇಲ್ಲದ ಕಾರಣ ಹೊಸದಾದ ಸಮೀಕ್ಷೆ ನಡೆಸಬೇಕೆಂದು ದಿನಾಂಕ 27-3-2025 ರಂದು ಆಯೋಗವು ಮಧ್ಯಂತರ ವರದಿ ಸಲ್ಲಿಸಿತು. ಅದೇ ದಿನವೇ ಸಚಿವ ಸಂಪುಟ ಮಧ್ಯಂತರ ವರದಿಯನ್ನು ಒಪ್ಪಿ ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಸಲು ನಿರ್ಣಯಿಸಿತು. 2025 ಮೇ 5 ರಿಂದ ಜುಲೈ 6 ರವರೆಗೆ ಸಮಗ್ರ ಸಮೀಕ್ಷೆ ನಡೆಸಲಾಯಿತು.ರಾಜ್ಯದ ಪರಿಶಿಷ್ಟ ಜಾತಿಯ 27,24,768 ಕುಟುಂಬಗಳು ಮತ್ತು 1,07,01,982 ಜನರು ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ.

ಸರ್ವೋಚ್ಚ ನ್ಯಾಯಾಲಯ ಮಾನದಂಡಗಳನ್ನು ಸೂಚಿಸಿದೆ:
ಒಳಜಾತಿಗಳ ವರ್ಗೀಕರಣಕ್ಕೆ ಕೆಳಗಿನ ಶೈಕ್ಷಣಿಕ ಹಿಂದುಳಿದಿರುವಿಕೆ, ಸರ್ಕಾರಿ ಉದ್ಯೋಗದಲ್ಲಿ ಅಗತ್ಯ ಪ್ರಾತಿನಿಧ್ಯದ ಕೊರತೆ,ಸಾಮಾಜಿಕ ಹಿಂದುಳಿದಿರುವಿಕೆ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮತ್ತು ಸರ್ಕಾರದ ಸಂಸ್ಥೆಗಳಿಂದ ಸಂಗ್ರಹಿಸಿದ ದತ್ತಾಂಶವನ್ನು ವಿಶ್ಲೇಷಿಸಿ, ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ಪರಿಶಿಷ್ಟ ಜಾತಿಯ ಒಳಜಾತಿಗಳನ್ನು ವರ್ಗೀಕರಿಸಿ ಲಭ್ಯವಿರುವ ಮೀಸಲಾತಿಯನ್ನು ಹಂಚಲಾಗಿದೆ. ವರದಿ, ಸಮೀಕ್ಷೆಯ ದತ್ತಾಂಶ ಮತ್ತು ಅನುಬಂಧಗಳು ಒಟ್ಟು ಸೇರಿ ಸುಮಾರು 1766 ಪುಟಗಳು ಮತ್ತು ಆರು ಶಿಫಾರಸ್ಸುಗಳನ್ನೊಳಗೊಂಡ ವರದಿಯನ್ನು ನೀಡಿದೆ.

ವಿಷೇಶವೆಂದರೆ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್ ರವರು ಯಾವುದೇ ರೀತಿಯ ಸಂಭಾವನೆ ಅಥವಾ ಗೌರವಧನ ಪಡೆಯಲಿಲ್ಲ.

ಒಳ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ಈ ಹಿಂದೆ ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗವು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಆದರೆ, ಆ ವರದಿಯನ್ನು ಬದಿಗಿಟ್ಟು ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿ.ಸಿ. ಮಾಧುಸ್ವಾಮಿ ನೇತೃತ್ವದ ಸಚಿವ ಸಂಪುಟ ಉಪ ಸಮಿತಿ ಪ್ರತ್ಯೇಕ ವರದಿ ನೀಡಿತ್ತು.

ಆ ಸಮಿತಿಯು ಪರಿಶಿಷ್ಟ ಜಾತಿಯನ್ನು ಪ್ರತ್ಯೇಕ ಗುಂಪುಗಳನ್ನಾಗಿ ವಿಂಗಡಿಸಿ ಮೀಸಲಾತಿ ಹಂಚಿಕೆ ಮಾಡಿತ್ತು. ಈ ಮಧ್ಯೆ, ವಿಧಾನಸಭಾ ಚುನಾವಣೆ ಎದುರಾಯಿತು. ಚುನಾವಣೆಯಲ್ಲಿ ಬಿಜೆಪಿ ಪರಾಭವಗೊಂಡಿತು. ನಂತರ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಒಳ ಮೀಸಲಾತಿಗಾಗಿ ನಾಗಮೋಹನ್‌ದಾಸ್ ಆಯೋಗದ ಮೂಲಕ ಹೊಸದಾಗಿ ಸಮೀಕ್ಷೆ ನಡೆಸಿದೆ. ಈ ಆಯೋಗವು ಜಾತಿಗಳನ್ನು ಯಾವ ರೀತಿ ಗುಂಪುಗಳಾಗಿ ವಿಂಗಡಿಸಿ, ಮೀಸಲಾತಿ ಹಂಚಿಕೆ ಮಾಡಿದೆ ಎಂಬ ಕುತೂಹಲ ಮೂಡಿದೆ.

News By: Raghu Shikari-7411515737