ಶಿಕಾರಿಪುರ , ಶಿರಾಳಕೊಪ್ಪ ಬ್ಲಾಕ್ ಅಧ್ಯಕ್ಷರ ಬದಲಾವಣೆ ನೂತನ ಅಧ್ಯಕ್ಷರು ಯಾರು..?
ಶಿಕಾರಿಪುರ ಶಿರಾಳಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಯನ್ನು ಮಾಡಿ ನೂತನ ಅಧ್ಯಕ್ಷರುಗಳನ್ನು ನೇಮಕ ಮಾಡಿ ಆದೇಶವನ್ನು ಕೆಪಿಸಿಸಿ ರಾಜ್ಯಧ್ಯಕ್ಷರಾದ ಡಿ ಕೆ ಶಿವಕುಮಾರ್ ಆದೇಶವನ್ನು ಮಾಡಿದ್ದಾರೆ.
ಶಿಕಾರಿಪುರ ತಾಲೂಕ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪರಿವಾಳದ ಶಿವಾರಂ ಅಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು ಶಿರಾಳಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ವೀರನಗೌಡ ಕೆ.ಎಸ್ ಅವರನ್ನು ನೇಮಕ ಮಾಡಲಾಗಿದೆ.
ಶಿಕಾರಿಪುರ ತಾಲೂಕ್ ಕಾಂಗ್ರೆಸ್ ನಲ್ಲಿ ಬಣಗಳ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ಲೋಕಸಭಾ ಚುನಾವಣೆ ಸಮಯದಲ್ಲಿ ಈ ಬದಲಾವಣೆ ಸಾಕಷ್ಟು ತಿರುವು ಪಡೆಯಲಿದೆ.