ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಬೆಳಗ್ಗೆ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲನ್ನು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಉದ್ಘಾಟಿಸಲಿದ್ದಾರೆ.
ಆರ್.ವಿ. ರಸ್ತೆಯಿಂದ ಕೋನಪ್ಪನ ಆಗ್ರಹಾರಕ್ಕೆ ತೆರಳುವ ಹಳದಿ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಳೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವರೆಗಿನ ಬೆಂಗಳೂರು ಮೆಟ್ರೋದ ಮೂರನೇ ಹಂತದ ರೈಲು ಮಾರ್ಗಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಬಳಿಕ, ಪ್ರಧಾನಿಯವರು ಅಮೃತಸರ ಶ್ರೀಮಾತಾ ವೈಷ್ಣೋದೇವಿ ಕತ್ರಾ ರೈಲಿಗೆ ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ.
ಪ್ರಧಾನಮಂತ್ರಿಯವರ ನಾಳಿನ ಪ್ರವಾಸದ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ, ಸಮಾಚಾರ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಇಂದು ರಾತ್ರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಕಾರ್ಯಕ್ರಮದ ಪೂರ್ವ ತಯಾರಿಯ ಪರಿಶೀಲನೆ ನಡೆಸಲಿದ್ದಾರೆ.
News by:Raghu Shikari-7411515737