ಶಿಕಾರಿಪುರ ತಾಲ್ಲೂಕಿನ ಉದ್ಯಮಿ ಅಖಿಲ ಕರ್ನಾಟಕ ವೀರಶೈವ ಮಹಾಸಭಾದ ರಾಜ್ಯ ಘಟಕದ ಕಾರ್ಯನಿರ್ವಾಹಕ ಸಮಿತಿ ಸದಸ್ಯರು ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ ಎನ್.ವಿ ಈರೇಶ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ ಎನ್ನುವ ಪೋಟೋ ಸಖತ್ ವೈರಲ್ ಆಗಿತ್ತು. ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿಲ್ಲ.
ಈ ಕುರಿತು ಎನ್ ವಿ ಈರೇಶ್ ಅವರು ಶಿಕಾರಿ ನ್ಯೂಸ್ ನೊಂದಿಗೆ ಮಾತನಾಡಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ವಿವಿಧ ಸಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ನಾನು ಕಾಂಗ್ರೆಸ್ ಪಕ್ಷದ ಮೂಲಕ ಮುಂದಿನ ರಾಜಕೀಯ ಭವಿಷ್ಯವನ್ನು ರೂಪಿಸಿಕೊಳ್ಳಲು ನಮ್ಮ ಬೆಂಬಲಿಗರು ಸ್ನೇಹಿತರ ಸಲಹೆ ಮೇರೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಅವಕಾಶ ಕಲ್ಪಿಸುವಂತೆ ಕೇಳಿಕೊಂಡಿದ್ದೇನೆ.
ಈ ಕುರಿತು ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಂದಿಗೆ ಚೆರ್ಚಿಸಿದ್ದೇನೆ ಅಧಿಕೃತವಾಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದರು.
News By: Raghu Shikari-7411515737