ಬೆಂಗಳೂರು : ಕಾಂಗ್ರೆಸ್ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 6:45ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಶಾಮನೂರು ಶಿವಶಂಕರಪ್ಪ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ ನ ಹಿರಿಯ ನಾಯಕರು ಹಾಗೂ ನೇರ ನುಡಿಗಳಿಂದ ಹೆಸರುವಾಸಿಯಾಗಿದ್ದರು.
