.
ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕುತೂಹಲದಿಂದ ಕಾಯುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-1ರ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಬಾರಿ ಪರೀಕ್ಷೆಗಳು ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿದ್ದು, ಒಟ್ಟು 9,02,889 ವಿದ್ಯಾರ್ಥಿಗಳು ಪರೀಕ್ಷೆಗೆ ಸಜ್ಜಾಗಿದ್ದಾರೆ.

ಪರೀಕ್ಷೆಯ ಪ್ರಮುಖ ಅಂಕಿ-ಅಂಶಗಳು:
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ಬಾರಿ ಪರೀಕ್ಷಾ ವ್ಯವಸ್ಥೆಯಲ್ಲಿ ತಂದಿರುವ ಮಹತ್ವದ ಬದಲಾವಣೆಗಳನ್ನು ಹಂಚಿಕೊಂಡರು.
ಒಟ್ಟು ಕೇಂದ್ರಗಳು: 2,871
ಸಮಯ: ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:15
ವಿದ್ಯಾರ್ಥಿಗಳ ವರ್ಗೀಕರಣ: 8,12,855 ಹೊಸಬರು, 62,845 ಪುನರಾವರ್ತಿತ ಮತ್ತು 27,189 ಖಾಸಗಿ ಅಭ್ಯರ್ಥಿಗಳು.

ಇತಿಹಾಸದಲ್ಲೇ ಮೊದಲ ಬಾರಿ ಮುಂಚಿತ ಫಲಿತಾಂಶ!
ರಾಜ್ಯ ಶಿಕ್ಷಣ ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿಗೆ, ಪರೀಕ್ಷೆ ಮುಗಿಯುವ ಮೊದಲೇ ಫಲಿತಾಂಶದ ಸಂಭಾವ್ಯ ದಿನಾಂಕವನ್ನು ಘೋಷಿಸಲಾಗಿದೆ.
ಏಪ್ರಿಲ್ 7, 2026 ರಂದು ಫಲಿತಾಂಶ ನೀಡುವ ಗುರಿಯನ್ನು ಇಲಾಖೆ ಹೊಂದಿದೆ. ಇದಕ್ಕಾಗಿ ಪೊಲೀಸ್, ಗುಪ್ತಚರ ಮತ್ತು ಜಿಲ್ಲಾಡಳಿತಗಳೊಂದಿಗೆ ಸಮಗ್ರ ಸಭೆ ನಡೆಸಿ ಸಿದ್ಧತೆ ಮಾಡಿಕೊಳ್ಳಲಾಗಿದೆ.

ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಸವಲತ್ತು:
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ, ಪರೀಕ್ಷಾ ದಿನಗಳಂದು ತಮ್ಮ ಹಾಲ್ ಟಿಕೆಟ್ ತೋರಿಸಿ KSRTC ಮತ್ತು BMTC ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಪರೀಕ್ಷೆ-1 ರ ವೇಳಾಪಟ್ಟಿ ಒಂದು ನೋಟದಲ್ಲಿ:
ಮಾರ್ಚ್ 18: ಪ್ರಥಮ ಭಾಷೆ
ಮಾರ್ಚ್ 23: ವಿಜ್ಞಾನ
ಮಾರ್ಚ್ 25: ದ್ವಿತೀಯ ಭಾಷೆ
ಮಾರ್ಚ್ 28: ಗಣಿತ
ಮಾರ್ಚ್ 30: ತೃತೀಯ ಭಾಷೆ
ಏಪ್ರಿಲ್ 2: ಸಮಾಜ ವಿಜ್ಞಾನ
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ:
080-23310076 / 080-23310075
News By Raghu Shikari-7411515737
