ದಾವಣಗೆರೆ: ದೇಶಸೇವೆಯ ಕನಸು ಕಾಣುತ್ತಿರುವ ಯುವಕರಿಗಾಗಿ ಭಾರತೀಯ ಸೇನೆಯು ಅಗ್ನಿಪಥ್ ಯೋಜನೆಯಡಿ 2027ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ದಾವಣಗೆರೆ ಸೇರಿದಂತೆ ರಾಜ್ಯದ ಒಟ್ಟು 11 ಜಿಲ್ಲೆಗಳ ಅರ್ಹ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯಾವೆಲ್ಲಾ ಜಿಲ್ಲೆಗಳ ಅಭ್ಯರ್ಥಿಗಳಿಗೆ ಅವಕಾಶ?
ಈ ನೇಮಕಾತಿ ರಾಲಿಯಲ್ಲಿ ಭಾಗವಹಿಸಲು ಈ ಕೆಳಗಿನ ಜಿಲ್ಲೆಗಳ ಯುವಕರು ಅರ್ಹರಾಗಿರುತ್ತಾರೆ:
ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು.
ಧಾರವಾಡ, ಗದಗ, ಹಾವೇರಿ.
ಬಾಗಲಕೋಟೆ, ವಿಜಯಪುರ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ.
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ www.joinindianarmy.nic.in ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಆನ್‌ಲೈನ್ ಅರ್ಜಿ ಸಲ್ಲಿಸಲು ಏಪ್ರಿಲ್ 1, 2026 ಕೊನೆಯ ದಿನಾಂಕವಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ:
ನೇಮಕಾತಿಗೆ ಸಂಬಂಧಿಸಿದ ದೈಹಿಕ ಮಾನದಂಡಗಳು, ವಯೋಮಿತಿ ಮತ್ತು ವಿದ್ಯಾರ್ಹತೆಯ ಸಂಪೂರ್ಣ ವಿವರಗಳಿಗಾಗಿ ಅಭ್ಯರ್ಥಿಗಳು ಮಂಗಳೂರು ಸೇನಾ ನೇಮಕಾತಿ ಕಚೇರಿಯನ್ನು ನೇರವಾಗಿ ಸಂಪರ್ಕಿಸಬಹುದು ಅಥವಾ ಅಧಿಕೃತ ಪೋರ್ಟಲ್‌ನಲ್ಲಿರುವ ಅಧಿಸೂಚನೆಯನ್ನು ಗಮನಿಸಬಹುದು.
News by: Raghu Shikari-7411515737
