ಶಿವಮೊಗ್ಗ: ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಫೆಬ್ರವರಿ 21 ರಂದು ಬೆಳಗ್ಗೆ 11 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ನಗರದ ಸಾಗರ ರಸ್ತೆಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಈ ನೇರ ಸಂದರ್ಶನ ನಡೆಯಲಿದೆ.
ಈ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಹಾಗೂ ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಈ ಉದ್ಯೋಗ ಮೇಳಕ್ಕೆ ಪ್ರವೇಶ ಉಚಿತವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9901914601 ಕ್ಕೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
News By: Raghu Shikari-7411515737
