ವೀರಶೈವ ಲಿಂಗಾಯತರಿಗೆ ‘ಆಹಾರ ವಾಹಿನಿ’ ಭಾಗ್ಯ: 3 ಲಕ್ಷ ರೂ. ಸಹಾಯಧನಕ್ಕೆ ಅರ್ಜಿ ಆಹ್ವಾನ​

ವೀರಶೈವ ಲಿಂಗಾಯತರಿಗೆ ‘ಆಹಾರ ವಾಹಿನಿ’ ಭಾಗ್ಯ: 3 ಲಕ್ಷ ರೂ. ಸಹಾಯಧನಕ್ಕೆ ಅರ್ಜಿ ಆಹ್ವಾನ​
Facebook
Twitter
LinkedIn
WhatsApp


ಶಿವಮೊಗ್ಗ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನ ‘ಆಹಾರ ವಾಹಿನಿ’ ಯೋಜನೆಯಡಿ ಸಂಚಾರಿ ತಿಂಡಿ ಮಳಿಗೆಗಳನ್ನು ನಡೆಸಲು ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

​ಈ ಯೋಜನೆಯಡಿ ನಾಲ್ಕು ಚಕ್ರಗಳ ಇವಿ-ಗೂಡ್ಸ್ (ವಿದ್ಯುತ್ ಚಾಲಿತ) ವಾಹನಗಳನ್ನು ಆಹಾರ ಮಳಿಗೆಗಳಾಗಿ ನವೀಕರಿಸಿ ವಿತರಿಸಲಾಗುವುದು. ಅಭ್ಯರ್ಥಿಗಳು ವಾಹನ ಖರೀದಿಸಲು ನಿಗಮದಿಂದ ಗರಿಷ್ಠ 3 ಲಕ್ಷ ರೂಪಾಯಿಗಳ ಸಹಾಯಧನ ಪಡೆಯಲು ಅವಕಾಶವಿದೆ ಎಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

​ಅರ್ಹತೆ ಮತ್ತು ಷರತ್ತುಗಳು:

ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ 3 ಲಕ್ಷ ರೂಪಾಯಿಯ ಒಳಗಿರಬೇಕು ಹಾಗೂ ವಯಸ್ಸು 21 ರಿಂದ 45 ವರ್ಷ ಮೀರಬಾರದು. ಈ ಹಿಂದೆ ನಿಗಮದ ಯಾವುದೇ ಯೋಜನೆಯಡಿ ಸೌಲಭ್ಯ ಪಡೆದವರು ಹಾಗೂ ಅವರ ಕುಟುಂಬದ ಸದಸ್ಯರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

​ಅರ್ಜಿದಾರರ ಹೆಸರು ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಬ್ಯಾಂಕ್ ಪಾಸ್‌ಬುಕ್‌ನಲ್ಲಿ ಒಂದೇ ರೀತಿ ಇರಬೇಕು. ಅಲ್ಲದೆ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರು ಸಹ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

​ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತರು ಸೇವಾಸಿಂದು ಪೋರ್ಟಲ್ (http://sevasindhukarnataka.gov.in) ಮೂಲಕ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಮಾರ್ಚ್ 06ರೊಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ:
ಹೆಚ್ಚಿನ ವಿವರಗಳಿಗೆ ನಿಗಮದ ಜಾಲತಾಣ http://kvldcl.karnataka.gov.in ಅಥವಾ ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು (ದೂರವಾಣಿ: 08182-229634) ಸಂಪರ್ಕಿಸಬಹುದಾಗಿದೆ.

News By: Raghu Shikari-7411515737