ಶಿಕಾರಿಪುರ: ಕರ್ತವ್ಯದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ದುರ್ಮರಣ

ಶಿಕಾರಿಪುರ: ಕರ್ತವ್ಯದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ದುರ್ಮರಣ
Facebook
Twitter
LinkedIn
WhatsApp

​ಶಿಕಾರಿಪುರ: ತಾಲೂಕಿನ ಕೆಇಬಿ ಸ್ಟೇಷನ್ ಎದುರು ವಿದ್ಯುತ್ ಲೈನ್ ಸರಿಪಡಿಸುವ ಕೆಲಸದಲ್ಲಿ ತೊಡಗಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಒಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

​ಮೃತರು ತಮ್ಮ ಕರ್ತವ್ಯದ ಅವಧಿಯಲ್ಲಿ 110/11 ಕೆವಿ ಸ್ಟೇಷನ್ ನಲ್ಲಿ ಲೈನ್ ದುರಸ್ತಿ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕರೆಂಟ್ ಶಾಕ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

​ಕುಟುಂಬದ ಆಧಾರಸ್ತಂಭವಾಗಿದ್ದ ವ್ಯಕ್ತಿಯನ್ನು ಕಳೆದುಕೊಂಡಿರುವ ಕುಟುಂಬವು ಈಗ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಮೂವರು ಹೆಣ್ಣು ಮಕ್ಕಳ ಭವಿಷ್ಯದ ಬಗ್ಗೆ ಆತಂಕ ಎದುರಾಗಿದ್ದು, ಇಡೀ ಕುಟುಂಬವು ತುಂಬಲಾರದ ನೋವಿನಲ್ಲಿದೆ.

​ಸರ್ಕಾರ ಮತ್ತು ಇಲಾಖೆಯು ಮೃತರ ಕುಟುಂಬಕ್ಕೆ ತಕ್ಷಣದ ಆರ್ಥಿಕ ನೆರವು ಘೋಷಿಸಬೇಕು ಹಾಗೂ ಅವರ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವ ಮೂಲಕ ಆ ಕುಟುಂಬಕ್ಕೆ ಆಸರೆಯಾಗಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

News By: Raghu Shikari-7411515737