ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ಮಕರ ಸಂಕ್ರಮಣ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೆರವೇರಿತು. ತಾಯಿ ಜಗನ್ಮಾತೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಹೋಮ ಹವನ ಪೂರ್ಣಾಹುತಿಯಲ್ಲಿ ಧರ್ಮದರ್ಶಿ ಡಾ.ಎಸ್.ರಾಮಪ್ಪನವರು ಕುಟುಂಬ ಸಮೇತರಾಗಿ ಭಾಗವಹಿಸಿ ವಿವಿಧ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾದರು.