ಕೆಪಿಎಸಿ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ:ಕೆಎಎಸ್ ಪರೀಕ್ಷೆ ಕುರಿತು ಸರ್ಕಾರ ಮುಖ್ಯಕಾರ್ಯದರ್ಶಿ ನೇತೃತ್ವದಲ್ಲಿ ಸಭೆ..!

ಕೆಪಿಎಸಿ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ:ಕೆಎಎಸ್ ಪರೀಕ್ಷೆ ಕುರಿತು ಸರ್ಕಾರ ಮುಖ್ಯಕಾರ್ಯದರ್ಶಿ ನೇತೃತ್ವದಲ್ಲಿ ಸಭೆ..!
Facebook
Twitter
LinkedIn
WhatsApp

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಕರ್ನಾಟಕ ಆಡಳಿತ ಸೇವೆ (KAS) 384 ಗೆಜೆಟೆಡ್ ಪ್ರೊಬೇಷನರಿ ಎ ಮತ್ತು ಬಿ ವೃಂದದ ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಯಡವಟ್ಟು ಆಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ ಅವರು ಆದ ಸಮಸ್ಯೆಗಳು ಪರಿಶೀಲಿಸಬೇಕು. ಚರ್ಚಿಸಲು ಸಭೆ ನಡೆಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.
ನಾಳೆ ಶನಿವಾರ ಜನವರಿ 18ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ಮಹತ್ವ ಸಭೆ ನಡೆಯಲಿದೆ. ಸಭೆ ಬಳಿಕ ಮಹತ್ವ ನಿರ್ಧಾರಗಳು ಪ್ರಕಟವಾಗುವ ಸಾಧ್ಯತೆ ಇದೆ. ಕೆಲವರು ಪರೀಕ್ಷೆ ನಡೆಸಿದ ಕರ್ನಾಟಕ ಲೋಕಸೇವಾ ಆಯೋಗವು (KPSC) ಜವಾಬ್ದಾರಿ ಕುರಿತು ಮಾತನಾಡಿದ್ದಾರೆ. ಸರ್ಕಾರ ಪರೀಕ್ಷಾರ್ಥಿಗಳ ಬದುಕಿನ ಜೊತೆಗೆ ಆಡವಾಡುತ್ತಿದೆ ಎಂದು ವಿಪಕ್ಷಗಳು ದೂರಿದ್ದಾರೆ.
ಸಭೆಯಲ್ಲಿ ಉಂಟಾದ ಲೋಪದೋಷಗಳು, ಸಾಧಕ ಬಾಧಕಗಳ ಕುರಿತು ಅಧಿಕಾರಿಗಳು ಚರ್ಚೆ ನಡೆಲಿಸಲಿದ್ದಾರೆ. ಬಳಿಕ ಮರು ಪರೀಕ್ಷೆ ನಡೆಸುತ್ತಾರೋ ಇಲ್ಲವೋ? ಎಂಬುದರ ಕುರಿತು ಅಥವಾ ಎಲ್ಲ ಪೂರ್ವಭಾವಿ ಪರೀಕ್ಷೆ ಬರೆದವರನ್ನು ಮುಖ್ಯ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂಬ ಆಗ್ರಹಗಳಿಗೆ ಉತ್ತರ ಸಿಗುವ ಸಾಧ್ಯತೆ ಇದೆ.