ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ತಡಸ ಕ್ರಾಸ್ ಬಳಿ ದುರ್ಘಟನೆ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದರೆ, ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.