ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆ ಅಂಗಳಕ್ಕೆ ಚಿರತೆ ನುಗ್ಗಿದೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಯಲ್ಲಿರುವಾಗಲೇ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ವೇಳೆ ಆಹಾರ ಅರಸಿ ಸಂಸದರ ಮನೆ ಅಂಗಳಕ್ಕೆ ಚಿರತೆ ನುಗ್ಗಿದೆ. ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಿವಾಸ ಶಿರಸಿ ತಾಲೂಕಿನ ಕಾಗೇರಿಯಲ್ಲಿದೆ. ಮನೆಯಯಲ್ಲಿದ್ದ ಸಾಕು ನಾಯಿಯನ್ನು ಬೇಟೆಯಾಡಲು ಚಿರತೆ ಅಟ್ಟಾಡಿಸಿಕೊಂಡು ಹೋಗಿದೆ. ತೋಟದ ಭಾಗದಿಂದ ಮನೆಯ ನಾಯಿಯನ್ನು ಚಿರತೆ ಅಟ್ಟಿಸಿಕೊಂಡು ಬಂದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಿರತೆ ದಾಳಿಯಿಂದ ತಪ್ಪಿಸಿಕೊಳ್ಳುವಲ್ಲಿ ಕಾಗೇರಿಯವರ ಮನೆಯ ಸಾಕು ನಾಯಿ ಯಶಸ್ವಿಯಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.