ಚಾರ್ಮಾಡಿ ಘಾಟಿಯ ಬಳಿ ಅರಣ್ಯಕ್ಕೆ ಭಾರಿ ಪ್ರಮಾಣದ ಕಾಡ್ಗಿಚ್ಚು..!

ಚಾರ್ಮಾಡಿ ಘಾಟಿಯ ಬಳಿ ಅರಣ್ಯಕ್ಕೆ ಭಾರಿ ಪ್ರಮಾಣದ ಕಾಡ್ಗಿಚ್ಚು..!
Facebook
Twitter
LinkedIn
WhatsApp

ಕೊಟ್ಟಿಗೆಹಾರ: ಚಾರ್ಮಾಡಿಘಟ್ ಬಳಿ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಅರಣ್ಯಕ್ಕೆ ಭಾರಿ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದೆ. 

ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರು. ರಸ್ತೆ ಬದಿ ಇದ್ದ ಬೆಂಕಿಯನ್ನಷ್ಟೇ ನಂದಿಸಲಾಗಿದ್ದು, ಗುಡ್ಡಕ್ಕೆ ಏರಿರುವ ಬೆಂಕಿ ನಂದಿಸಲು ಸಾಧ್ಯವಾಗದೆಪರದಾಡಿದ್ದಾರೆ ಎನ್ನಲಾಗಿದೆ.ಮಲ್ಲೇಶ್, ರಂಜಿತ್, ಮುತ್ತಪ್ಪ, ಅಶೋಕ್, ಮೋಹನ್‌ರಾಜ್(ಚಾಲಕ) ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

ಬೆಂಕಿಯ ಕೆನ್ನಾಲಿಗೆ 10 ಕಿಲೋ ಮೀಟರ್ ದೂರಕ್ಕೂ ಕಾಣಿಸುತ್ತಿದೆ. ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಬೆಂಕಿ ಹೊತ್ತಿಕೊಂಡು ಎರಡು ಗಂಟೆ ಕಳೆದರೂ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಭಾಗದಲ್ಲಿ ವನ್ಯಜೀವಿ ಮತ್ತು ಸಸ್ಯ ಸಂಪತ್ತು ಅಪಾರ ಪ್ರಮಾಣದಲ್ಲಿದೆ. ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂದಿ ಪರದಾಡುತ್ತಿದ್ದಾರೆ.

ಸುದ್ದಿ ಮತ್ತು‌ ಜಾಹೀರಾತಿಗಾಗಿ-7411515737