ಶಿಕಾರಿಪುರ ತಾಲೂಕಿನ ಸಾಲೂರು ಹಾಗೂ ಹರಿಹರಪುರ ಗ್ರಾಮಗಳಲ್ಲಿ ನಿರಂತರವಾಗಿ ವಿದ್ಯುತ್ ವ್ಯತ್ಯಯ ಮಾಡಲಾಗಿದೆ ಎಂದು ಊರಿನ ಗ್ರಾಮಸ್ಥರು ಪಟ್ಟಣದ ಮೆಸ್ಕಾಂ ಕಛೇರಿ ಎದುರು ಪ್ರತಿಭಟನೆ ನಡೆಸಿದರು.
ಕಳೆದ 12 ದಿನಗಳಿಂದ ವಿದ್ಯುತ್ ಇಲ್ಲದೆ ರತರು ಬೆಳೆದ ಬೆಳೆಗಳು ನಾಶವಾಗುತ್ತಿದೆ ಮೆಸ್ಕಾಂ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಮಸ್ಯೆ ಬಗ್ಗೆ ತಿಳಿಸಲಾಗಿದ್ದು ಅವರು ಸ್ಪಂದಿಸುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ.
ಕೂಡಲೇ ಮೇಲಾಧಿಕಾರಿಗಳು ಸಮಸ್ಯೆಗಳನ್ನು ಪರಿಶೀಲಿಸಿ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ್ ಗ್ರಾಮ ಪಂಚಾಯತಿ ಅಧ್ಯಕ್ಷ ಹನುಮಂತ, ಮುಖಂಡರಾದ ಶೇಖರ್ ನಾಯ್ಕ್
ಹನುಮಂತಪ್ಪ, ಮಂಜು ನಾಯ್ಕ , ರವಿ ನಾಯ್ಕ್ ಜಮಾಲುದ್ದೀನ್, ಚರಣ್ ಇದ್ದರು.
ಸುದ್ದಿ ಮತ್ತು ಜಾಹೀರಾತಿಗಾಗಿ-7411515737