ಪ್ರಯಾಗ್ ರಾಜ್ ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ರಾಜ್ಯದ 4 ಮಂದಿ ಸಾವು..!

ಪ್ರಯಾಗ್ ರಾಜ್ ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ರಾಜ್ಯದ 4 ಮಂದಿ ಸಾವು..!
Facebook
Twitter
LinkedIn
WhatsApp

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಭಕ್ತರ ಜನದಟ್ಟಣೆಯಿಂದ ಕಾಲ್ತುಳಿತ ಉಂಟಾಗಿ ಬೆಳಗಾವಿಯ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಪಷ್ಟಪಡಿಸಿದ್ದಾರೆ.

ಮಹಾಕುಂಭ ಮೇಳದ ಕಾಲ್ತುಳಿತಕ್ಕೆ ಸಿಲುಕಿದ್ದ ಇವರನ್ನು ಪ್ರಯಾಗರಾಜ್ ನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ. ಇದೇ 26 ರಂದು ಖಾಸಗಿ ಸಾರಿಗೆ ಸಂಸ್ಥೆಯ ಮೂಲಕ 13 ಜನರ ತಂಡ ಕುಂಭಮೇಳಕ್ಕೆ ತೆರಳಿತ್ತು ಎಂದು ಅವರು ವಿವರ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಲ್ತುಳಿತದಲ್ಲಿ ಗಾಯಗೊಂಡಿರುವ ರಾಜ್ಯದ ಯಾತ್ರಿಗಳನ್ನು ಸುರಕ್ಷಿತವಾಗಿ ಕರೆ ತರಲಾಗುವುದು ಎಂದು ತಿಳಿಸಿದ್ದಾರೆ. ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಜಾಗರೂಕತೆಯಿಂದ ಇರಿ ಎಂದು ತಿಳಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತಿಗಾಗಿ-7411515737