ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಣ್ಣ ಹಣಕಾಸು ಸಂಸ್ಥೆಗಳ ಹಾವಳಿ ತಡೆಗೆ ನೂತನ ವಿಧೇಯಕ ತರಲು ಒಪ್ಪಿಗೆ ನೀಡಲಾಗಿದೆ.
ರಾಜ್ಯದಲ್ಲಿ ಸಣ್ಣ ಹಣಕಾಸು ಸಂಸ್ಥೆಗಳಿಗೆ ಕಡಿವಾಣ ಹಾಕುವ ಸುಗ್ರೀವಾಜ್ಞೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ್ದು, ರಾಜ್ಯಪಾಲರ ಅಂಕಿತ ಪಡೆಯಲಿದೆ. ಸಂಪುಟ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ದಿಶೆಯಲ್ಲಿ ಪರಮಾಧಿಕಾರ ನೀಡಿದೆ.
ಈ ಕುರಿತು ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ರಾಜ್ಯದಲ್ಲಿ ಸಣ್ಣ ಹಣಕಾಸು ಸಂಸ್ಥೆಗಳ ಹಾವಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ.
ರಾಜ್ಯದಲ್ಲಿ ಸಣ್ಣ ಹಣಕಾಸು ಸಂಸ್ಥೆಗಳ ಸಿಬ್ಬಂದಿಯಿಂದ ಕಿರುಕುಳಕ್ಕೆ ಒಳಗಾದ ಜನರು ಸಾವಿನ ಹಾದಿಯನ್ನು ಹಿಡಿಯುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಜಾರಿಗೊಳಿಸಲು ಇಂದಿನ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.
ಸುದ್ದಿ ಮತ್ತು ಜಾಹೀರಾತಿಗಾಗಿ-7411515737