ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಚಿಂಕೆ ಮರಿ ಸಾವು..!

ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಚಿಂಕೆ ಮರಿ ಸಾವು..!
Facebook
Twitter
LinkedIn
WhatsApp

ಶಿವಮೊಗ್ಗ: ಅರಣ್ಯ ಅಧಿಕಾರಿಗಳಿಂದ ಜಿಂಕೆ ಮರಿಯೊಂದು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಉಳವಿ ಗ್ರಾಮದ ಬಳಿ ಶನಿವಾರ ನಡೆದಿದೆ.

ಉಳವಿ ಗ್ರಾಮದಿಂದ ಶಿರಾಳಕೊಪ್ಪ ಹೋಗುವ ಮಾರ್ಗದಲ್ಲಿ ಬರುವ ದಟ್ಟ ಕಾಡಿನ ನಡುವೆ ಚಿಂಕೆ ಮರಿ ಒಂದು ದಿಢೀರನೇ ರಸ್ತೆಗೆ ಬಂದಿದೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಅಪರಿಚಿತ ಕಾರು ಒಂದು ಚಿಂಕೆ ಮರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆಮರಿಯ ಕಾಲಿಗೆ ತೀವ್ರವಾದ ಪೆಟ್ಟು ಬಿದ್ದು ರಸ್ತೆಗೆ ಬಿದ್ದಿತ್ತು.

ತಕ್ಷಣ ರಸ್ತೆಯಲ್ಲಿ ಹೋಗುತ್ತಿದ್ದ ವಾಹನ ಸವಾರರು ಹಾಗೂ ಗ್ರಾಮಸ್ಥರು ಜಿಂಕೆ ಮರಿಯನ್ನು ರಕ್ಷಣೆ ಮಾಡಲು ಮುಂದಾಗಿದ್ದಾರೆ .

ಘಟನೆ ನಡೆದ ತಕ್ಷಣ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಪ್ರತ್ಯಕ್ಷದರ್ಶಿಗಳು ಘಟನೆ ನಡೆದು ಒಂದು ತಾಸು ಆದರು ಸ್ಥಳಕ್ಕೆ ಬಾರದೇ ಇರುವ ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಚಿಂಕೆ ಮರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಅರಣ್ಯ ಅಧಿಕಾರಿಗಳ ನಿರ್ಲಕ್ಷವನ್ನು ಖಂಡಿಸಿ ಗ್ರಾಮಸ್ಥರು ಹಾಗೂ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆಯಿತು.

ಏನೇ ಆಗಲಿ ಅರಣ್ಯ ಅಧಿಕಾರಿಗಳ ನಿರ್ಲಕ್ಷದಿಂದ ಮೂಕ ಪ್ರಾಣಿ ಒಂದು ಜೀವ ಬಿಟ್ಟಿದ್ದು ಅನಾಹುತವೇ ಅನ್ನಬಹುದು ಸಂಬಂಧಪಟ್ಟ ಅಧಿಕಾರಿಗಳು ಸಬಂಧಪಟ್ಟ ಸಿಬ್ಬಂದಿಯ ಮೇಲೆ ಶಿಸ್ತುಕ್ರಮ ಜರುಗಿಸಬೇಕು ಎನ್ನುವುದೇ ಸಾರ್ವಜನಿಕರ ಆಗ್ರಹವಾಗಿದೆ.

ಸುದ್ದಿ ಮತ್ತು ಜಾಹೀರಾತಿಗಾಗಿ-7411515737