ಹಾಸನ: ಭದ್ರಾವತಿಯಲ್ಲಿ ಮೈಸೂರು ಮಹಾರಾಜರು ಮತ್ತು ಸರ್ ಎಂ ವಿಶ್ವೇಶ್ವರಯ್ಯ ಅವರು ಕಟ್ಟಿರುವ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಮುಚ್ಚಿ ಹೋಗಿದೆ. ಅದಕ್ಕೆ ಮರು ಜೀವ ಪ್ರಯತ್ನಕ್ಕೂ ಕೈ ಹಾಕಿದ್ದೇನೆ ಎಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಈ ಕಾಂಗ್ರೆಸ್ ಸರಕಾರ ಎಷ್ಟರಮಟ್ಟಿಗೆ ನನಗೆ ಬೆಂಬಲ ಕೊಡುತ್ತೋ, ಬಿಡುತ್ತೋ ಗೊತ್ತಿಲ್ಲ. ಇತಿಚೆಗೆ ಜಾರ್ಖಂಡ್ ರಾಜ್ಯದ ಬೋಕಾರೋ ಉಕ್ಕು ಕಾರ್ಖಾನೆಗೆ ಭೇಟಿ ನೀಡಿದ್ದೆ. ಅಲ್ಲಿ ವಿಸ್ತರಣಾ ಯೋಜನೆಗೆ ₹20,000 ಕೋಟಿ ಹೂಡಿಕೆ ಮಾಡುತ್ತಿದ್ದೇವೆ.
ಬೇರೆ ರಾಜ್ಯ ರಾಜ್ಯಗಳಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ಹೋದರೆ ಅಲ್ಲಿನ ನಾಯಕರು ಪಕ್ಷಾತೀತವಾಗಿ ಸಹಕಾರ ಕೊಡುತ್ತಾರೆ. ನಮ್ಮವರಿಗೆ ಏನಾಗಿದೆ? ಕುಮಾರಸ್ವಾಮಿ ಕರ್ನಾಟಕಕ್ಕೆ ಬರುತ್ತಾನೆ ಎಂದರೆ ಇವರಿಗೆ ಹೊಟ್ಟೆನೋವು ಆಗುತ್ತದೆ ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.
ಸುದ್ದಿ ಜಾಹೀರಾತಿಗಾಗಿ-7411515737