ದೆಹಲಿ: 70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ನಾಳೆ ಮತದಾನ ನಡೆಯಲಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾರರು ತಮ್ಮ ಹಕ್ಕು ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.
ಒಂದು ಕೋಟಿ 56 ಲಕ್ಷಕ್ಕೂ ಹೆಚ್ಚು ಮತದಾರರು ಕಣದಲ್ಲಿರುವ 699 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧರಿಸಲಿದ್ದಾರೆ. ಈ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಿನ್ನೆ ಸಂಜೆ ತೆರೆ ಬಿದ್ದಿದೆ.
ಸುಗಮ ಚುನಾವಣೆಗಾಗಿ ಚುನಾವಣಾ ಆಯೋಗ 1.8 ಲಕ್ಷಕ್ಕೂ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿದೆ. ಇಲ್ಲಿಯವರೆಗೆ ಸುಮಾರು 220 ಕೋಟಿಗೂ ಅಧಿಕ ಮೌಲ್ಯದ ನಗದು, ಮದ್ಯ, ಮಾದಕ ದ್ರವ್ಯ, ವಿತರಿಸಲಾಗುತ್ತಿದ್ದ ಉಚಿತ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಚುನಾವಣೆಯಲ್ಲಿ ಕಾರ್ಯನಿರತ ಸಿಬ್ಬಂದಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದೆಹಲಿ ಮೆಟ್ರೊ ತನ್ನ ಕಾರ್ಯಾಚರಣೆಯನ್ನು ಬೆಳಗ್ಗೆ 4 ಗಂಟೆಗೆ ಆರಂಭಿಸಲಿದೆ. ಬೆಳಗ್ಗೆ 6 ಗಂಟೆಯ ವೇಳೆಗೆ ಪ್ರತಿ 30 ನಿಮಿಷಗಳಿಗೊಮ್ಮೆ ರೈಲು ಚಲಿಸಲಿದ್ದು, ಬಳಿಕ ಎಂದಿನ ವೇಳಾಪಟ್ಟಿಯನ್ನು ಅನುಸರಿಸಲಾಗುವುದು.
ಸುದ್ದಿ ಮತ್ತು ಜಾಹೀರಾತಿಗಾಗಿ-7411515737