ಬೆಂಗಳೂರು: ಬಲವಂತವಾಗಿ ಸಾಲ ವಸೂಲಿ ಮಾಡುವ ಸಣ್ಣ ಹಣಕಾಸು ಕಂಪನಿಯ ಸಿಬ್ಬಂದಿ ವಿರುದ್ಧ 3 ವರ್ಷ ಇದ್ದ ಶಿಕ್ಷೆಯ ಅವಧಿಯನ್ನು 10 ವರ್ಷಕ್ಕೆ ಏರಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ದಂಡದ ಪ್ರಮಾಣವನ್ನು 5 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಸಷ್ಟಪಡಿಸಿದ್ದಾರೆ. ಕಿರುಕುಳ ಕೊಡುವವರಿಗೆ ಕಾನೂನಿನ ಬಿಸಿ ತಟ್ಟಬೇಕು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯಪಾಲರಿಗೆ ಈಗಾಗಲೇ ಮಸೂದೆ ಕಳುಹಿಸಲಾಗಿದೆ. ಅವರು ಸಹಿ ಮಾಡಿದ ಕೂಡಲೇ ಸುಗ್ರೀವಾಜ್ಞೆ ಜಾರಿ ಆಗಲಿದೆ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದ್ದಾರೆ.
ಸಣ್ಣ ಹಣಕಾಸು ಸಂಸ್ಥೆಗಳು ನ್ಯಾಯಾಲಯಕ್ಕೆ ಹೋಗಬಹುದು ಎಂಬ ದೃಷ್ಟಿಯಿಂದ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಂಡು, ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಕರಡು ಸಿದ್ಧ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿ ಜಾಹೀರಾತಿಗಾಗಿ-7411515737