ಶಿಕಾರಿಪುರ ತಾಲೂಕಿಗೆ ನಾಳೆ (ಬುಧವಾರ) ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವರಾದ ಮುಧು ಬಂಗಾರಪ್ಪ ಅವರು ಆಗಮಿಸಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ನೆಲವಾಗಿಲು ಗ್ರಾಮದಲ್ಲಿ ಕೃಷಿ ಅಧ್ಯಯನ ಶಿಬಿರ ಮುಕ್ತಾಯ ಸಮಾರಂಭದಲ್ಲಿ ಭಾಗವಹಿಸಲಿದ್ದು ನಂತರ ತಾಲೂಕ್ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ಶಿವಪುರ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟಿಸಿ ಬಳಿಕ ಜಾವಗಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಮಾರಂಭಕ್ಕೆ ಚಾಲನೆ ನೀಡಲಿದ್ದು ಸ್ವಕ್ಷೇತ್ರ ಸೊರಬದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಸಚಿವರ ಕಛೇರಿಯಿಂದ ಮಾಹಿತಿ ತಿಳಿಸಲಾಗಿದೆ.