ಸಚಿವರ ಭರವಸೆಗೆ ಪ್ರತಿಭಟನಾ ಧರಣಿ ಹಿಂಪಡೆದ ರೈತ ಸಂಘ..!

ಸಚಿವರ ಭರವಸೆಗೆ ಪ್ರತಿಭಟನಾ ಧರಣಿ ಹಿಂಪಡೆದ ರೈತ ಸಂಘ..!
Facebook
Twitter
LinkedIn
WhatsApp

ಶಿಕಾರಿಪುರದ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಹಮ್ಮಿಕೊಂಡಿದ್ದ “ಬೃಹತ್ ಪ್ರತಿಭಟನಾ” ಸ್ಥಳಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ, ರೈತರ ಸಮಸ್ಯೆಗಳನ್ನು ಆಲಿಸಿದರು.

ಈಸೂರು ಭಾಗದಲ್ಲಿ ಕೆ.ಪಿ.ಟಿ.ಸಿ.ಎಲ್ 4.5 ಕಿ.ಮೀ. ದೂರವಿರುವ ಗ್ರೀಡ್ ಗೆ 20 ಕಿ.ಮೀ. ನಿಂದ ಹೈಟೆನ್ಷನ್ ವಿದ್ಯುತ್ ಮಾರ್ಗ ಯೋಜನೆ ರೂಪಿಸುತ್ತಿದೆ. ಇದು ಅವೈಜ್ಞಾನಿಕವಾಗಿದ್ದು “ಹೈಟೆನ್ಷನ್ ವಿದ್ಯುತ್ ಮಾರ್ಗ ನಿರ್ಮಾಣ” ಕಾಮಗಾರಿ ಮಾಡದಂತೆ ರೈತರು ಮನವಿ ಸಲ್ಲಿಸಿದರು.

ಈ ಪ್ರದೇಶದಲ್ಲಿ ರೈತರು ಉತ್ತಮ ಬೆಳೆ ಬೆಳೆಯುತ್ತಿದ್ದು, ವಿದ್ಯುತ್ ಮಾರ್ಗ ನಿರ್ಮಾಣ ಮಾಡಿದರೆ ರೈತರು ತಮ್ಮ ಅಡಿಕೆ ತೋಟಗಳ ಮೇಲೆ ಹೈ ಟೆನ್ಶನ್ ವಿದ್ಯುತ್ ಮಾರ್ಗ ಹಾದು ಹೋದರೆ ತೋಟವನ್ನು ಕಳೆದುಕೊಂಡು ಬೀದಿಗೆ ಬಂದು ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ತಮ್ಮ ಅಳಲು ಸಚಿವರ ಎದುರು ತೋಡಿಕೊಂಡರು.

ಈ ವೇಳೆ ಮಾತನಾಡಿ ಅವರು ನಾವು ರೈತರ ಪರವಾಗಿದ್ದು ಈ ಕೂಡಲೇ ಸಂಬಂಧಿಸಿದ ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಮಾತನಾಡಿ ಅವೈಜ್ಞಾನಿಕ ಕಾಮಗಾರಿಯಾಗಿದ್ದರೆ ಅದರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿ ಮನವೊಲಿಸಿ, ಪ್ರತಿಭಟನೆಯನ್ನು ಹಿಂಪಡೆಯುವಂತೆ ಸೂಚಿಸಿದರು ಸಚಿವರ ಮಾತಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ರೈತ ಮುಖಂಡರುಗಳು ಪ್ರತಿಭಟನೆಯನ್ನು ಹಿಂಪಡೆದರು.

ಈ ವೇಳೆ ಸಾಗರ ಉಪವಿಭಾಗಾಧಿಕಾರಿ ಯತೀಶ್ ಆರ್, ತಹಶೀಲ್ದಾರ್ ಮಲ್ಲೇಶ್ ಬಿ ಪೂಜಾರ್ , ಮುಖಂಡರಾದ ಎಸ್ ಪಿ ನಾಗರಾಜ ಗೌಡ್ರು ಸೇರಿದಂತೆ ಅನೇಕ ರೈತ ಮುಖಂಡರುಗಳು ಇದ್ದರು.