ತುರ್ತು ಚಿಕಿತ್ಸಾ ವೈದ್ಯರ ನೇರ ಸಂದರ್ಶನಕ್ಕೆ ಆಹ್ವಾನ

ತುರ್ತು ಚಿಕಿತ್ಸಾ ವೈದ್ಯರ ನೇರ ಸಂದರ್ಶನಕ್ಕೆ ಆಹ್ವಾನ
Facebook
Twitter
LinkedIn
WhatsApp

ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಅಧೀನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿಯಿರುವ 13 ತುರ್ತು ಚಿಕಿತ್ಸಾ ವೈದ್ಯರು/ಅಪಘಾತ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಅಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರ ವೈದ್ಯರುಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು, ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಫೆ. 12 ರಂದು ಬೆಳಿಗ್ಗೆ 11.00 ರಿಂದ ಮ. 1.00 ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಆ &ಕು.ಕ.ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-222382 ನ್ನು ಸಂಪರ್ಕಿಸುವುದು.