ಬೆಂಗಳೂರು: ಈಗಾಗಲೇ ಹದಿಮೂರು ಸಾವಿರ ಶಿಕ್ಷಕರನ್ನು ನೇಮಿಸಲಾಗಿದೆ. ಇನ್ನೂ ಹದಿನೈದು ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಚಿತ್ರದುರ್ಗದ ಮುರುಘಮಠದ ಅನುಭವ ಮಂಟಪದಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ರಾಜ್ಯ ಮಟ್ಟದ ’ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2024-2025’ ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಕಲೆ, ಸಂಗೀತ ಮತ್ತು ಇತರೆ ಸಾಂಸ್ಕೃತಿಕ ಕಲೆಗಳನ್ನು ಕಲಿಸುವ ಶಿಕ್ಷಕರನ್ನು ನೇಮಿಸಲಾಗುವುದು ಎಂದು ಮಾಹಿತಿ ನೀಡಿದರು.
ಸುದ್ದಿ ಜಾಹೀರಾತಿಗಾಗಿ-7411515737