ಶಿಕಾರಿಪುರ ಪಟ್ಟಣದ ತಾಲೂಕ್ ಕಛೇರಿ ಆಚರಣದಲ್ಲಿ ಸೋಮವಾರ ಗ್ರಾಮ ಆಡಳಿತ ಅಧಿಕಾರಿಗಳು ( ಗ್ರಾಮ ಲೇಕ್ಕಿಗರು) ಪ್ರತಿಭಟನೆ ಧರಣಿ ನಡೆಸಿದ್ದಾರೆ.
ಕಂದಾಯ ಇಲಾಖೆಯ ಮೂಲ ಆಧಾರ ಸ್ತಂಭವಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಉತ್ತಮ ಕಛೇರಿ ಪೀಠೋಪಕರಣಗಳನ್ನು ಒದಗಿಸಬೇಕು ಹಾಗೂ ಇನ್ನು ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಲಾಗುತ್ತಿದೆ.

ಫೆ.10 ರಂದು ಇಡೀ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದ್ದು ತಾಲೂಕಿನ ಎಲ್ಲಾ ವಿಎ ಸಿಬ್ಬಂದಿಗಳು ಇಂದು ಕರ್ತವ್ಯಕ್ಕೆ ಹಾಜರಾಗದೇ ಪ್ರತಿಭಟನೆ ನಡೆಲಾಗುತ್ತಿದೆ ಎಂದು ಸಂಘದ ಪ್ರಮುಖರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ನೌಕರರ ಸಂಘದ ತಾಲೂಕ್ ಅಧ್ಯಕ್ಷ ಹರ್ಷ, ಕಂದಾಯ ನೌಕರರ ಸಂಘದ ಅಧ್ಯಕ್ಷ ಮಿಥುನ್ ಕುಮಾರ್,ಮಹಾರುದ್ರಪ್ಪ,ವಿನಾಯಕ, ಗಣೇಶ್, ರೂಪ, ಸಮಿತ್ರಾ,ಗೀತಾ, ಇದ್ದರು.
ಸುದ್ದಿ ಜಾಹೀರಾತಿಗಾಗಿ-7411515737