ಬೆಂಗಳೂರು: ಬಿಎಂಆರ್ಸಿಎಲ್ ಟಿಕೆಟ್ ದರ ಏರಿಕೆ ಮಾಡಿದ ಹಿನ್ನೆಲೆಯಲ್ಲಿ ಪ್ರಯಾಣಿಕರು ನಮ್ಮ ಮೆಟ್ರೋಗೆ ಶಾಕ್ ನೀಡಿದ್ದಾರೆ
ಟಿಕೆಟ್ ದರವನ್ನು ಏರಿಕೆ ಮಾಡಿದ್ದರಿಂದ ಆಕ್ರೋಶಗೊಂಡಿರುವ ಪ್ರಯಾಣಿಕರು ಓಡಾಡುವ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ. ಮೆಟ್ರೋಗೆ ನೀಡುವ ಹಣಕ್ಕಿಂತ ಆಟೋ, ಬೈಕ್ ಬೆಸ್ಟ್ ಎನ್ನುತ್ತಿದ್ದಾರೆ.
ಹೀಗಾಗಿ ಟಿಕೆಟ್ ದರ ಏರಿಕೆಯಾದ ಬೆನ್ನಲ್ಲೇ ಮೆಟ್ರೋನಲ್ಲಿ ಪ್ರಯಾಣಿಸುವವರ ಪ್ರಯಾಣಿಕರ ಸಂಖ್ಯೆಯಲ್ಲಿ ಕುಸಿತವಾಗಿದೆ.

ಪ್ರತಿದಿನ ಮೆಟ್ರೋದಲ್ಲಿ 8 ರಿಂದ 9 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಆದ್ರೆ, ಇದೀಗ ದರ ಏರಿಕೆಯಾದ ಮೇಲೆ ಪ್ರಯಾಣಿಕರ ಸಂಖ್ಯೆ 35% ರಿಂದ 40% ರಷ್ಟು ಕಡಿಮೆಯಾಗಿದೆ. ಸಮಯ ಉಳಿತಾಯದಿಂದ ಮಧ್ಯಮ ವರ್ಗದ ಜನರು ಕೆಲಸಕ್ಕೆ ಹೋಗಲು ಕಾರು, ಬೈಕ್ ಬಿಟ್ಟು ನಮ್ಮ ಮೆಟ್ರೋವನ್ನೇ ಅವಲಂಬಿಸಿದ್ದರು. ಆದ್ರೆ, ಟಿಕೆಟ್ ದರ ಏರಿಕೆಯಿಂದಾಗಿ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಪ್ರತಿದಿನ ಮೆಟ್ರೋದಲ್ಲಿ 8 ರಿಂದ 9 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಆದ್ರೆ ದರ ಏರಿಕೆ ಆದ ಮೇಲೆ ಪ್ರತಿದಿನ 6 ರಿಂದ 7 ಲಕ್ಷ ಪ್ರಯಾಣಿಕರು ಮಾತ್ರ ಸಂಚಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಯಾಣಿಕರ ಸಂಖ್ಯೆ ಕುಂಠಿತವಾಗುತ್ತಿದ್ದಂತೆಯೇ ಸಹಜವಾಗಿ ಕಲೆಕ್ಷನ್ ಸಹ ಕಡಿಮೆಯಾಗಿದೆ. ದರ ಏರಿಕೆ ಮಾಡುವ ಮೊದಲು ಒಂದು ದಿನಕ್ಕೆ 2 ಕೋಟಿ ರೂಪಾಯಿಂದ 2.50 ಕೋಟಿ ರುಪಾಯಿ ಕಲೆಕ್ಷನ್ ಆಗುತ್ತಿತ್ತು. ದರ ಏರಿಕೆ ಬಳಿಕ ದಿನಕ್ಕೆ ಒಂದೂವರೆಯಿಂದ 2 ಕೋಟಿ ರೂ.ವರೆಗೆ ಮಾತ್ರ ಕಲೆಕ್ಷನ್ ಆಗುತ್ತಿದ್ಯಂತೆ.
ಈ ಸೋಮವಾರದಿಂದ ಮೆಟ್ರೋ ಪ್ರಯಾಣಿಕರು ಮೆಟ್ರೋ ಬಿಟ್ಟು ತಮ್ಮ ಸ್ವಂತ ಕಾರು, ಬೈಕ್ ನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಹೀಗಾಗಿ ಕಳೆದ ನಾಲ್ಕು ದಿನದಿಂದ ಬೆಂಗಳೂರು ನಗರದಲ್ಲಿ ವಿಪರೀತವಾಗಿ ಟ್ರಾಫಿಕ್ ಸಮಸ್ಯೆ ಸಹ ಹೆಚ್ಚಾಗಿದೆ.
ಸುದ್ದಿ ಜಾಹೀರಾತಿಗಾಗಿ- 7411515737