ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ ನಿಭಾಯಿಸಲು ಸಿದ್ದ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಹೈಕಮಾಂಡ್‌ಗೆ ತಮ್ಮ ಅಭಿಪ್ರಾಯ ತಿಳಿಸಿದ್ದು, ’ಒಬ್ಬ ವ್ಯಕ್ತಿಗೆ ಒಂದು ಹುದ್ದೆ’ ಸಿದ್ಧಾಂತಕ್ಕೆ ಬದ್ಧವಾಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಎಲ್ಲ ಸಮುದಾಯಗಳು ಬೆಂಬಲ ನೀಡಿದ್ದು, ಶೋಷಿತ ವರ್ಗಗಳ ಸಮಾವೇಶ ಏರ್ಪಡಿಸುವ ಮೂಲಕ ಅವರಿಗೆ ಅಭಿನಂದಿಸಲಾಗುವುದು ಎಂದು ಹೇಳಿದ್ದಾರೆ.
ಸುದ್ದಿ ಜಾಹೀರಾತಿಗಾಗಿ- 7411515737