ಬೆಂಗಳೂರು: ಅನಧಿಕೃತ ಬಡಾವಣೆಗಳಿಗೆ ’ಬಿ’ ಖಾತಾ ನೀಡಿ ಆಧಾಯಗಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ, ಕಂದಾಯ ಅಧಿಕಾರಿಗಳೊಂದಿಗೆ ಸಭೆ ನಡೆಸದ ಅವರು, ಅನಧಿಕೃತ ಬಡಾವಣೆಗಳಿಂದ ಕಂದಾಯ ಬರುತ್ತಿಲ್ಲ. ಪರಿಣಾಮ ಜನರಿಗೆ ನಾಗರಿಕ ಸವಲತ್ತುಗಳೂ ಸಿಗುತ್ತಿಲ್ಲ. ಸ್ಥಳೀಯ ಸಂಸ್ಥೆಗಳಿಗೆ ಆದಾಯವೂ ಬಂದ್ ಆಗಿದೆ. ಇದಕ್ಕೆ ಅಂತ್ಯ ಹಾಡಬೇಕಿದೆ. ಹೀಗಾಗಿ ಈ ರೀತಿಯ ನಿವೇಶನಗಳಿಗೆ ’ಬಿ’ ಖಾತಾಗಳನ್ನು ನೀಡಲು ಅಭಿಯಾನ ಆರಂಭಿಸುವಂತೆ ನಿರ್ದೇಶಿಸಿದರು.

ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಅನಧಿಕೃತ ಬಡಾವಣೆಗಳು ಇವೆ. ಇದಕ್ಕೆ ಕಡಿವಾಣ ಹಾಕಬೇಕಿದೆ. ಮುಂದಿನ ಮೂರು ತಿಂಗಳಲ್ಲಿ ಅಭಿಯಾನ ನಡೆಸಿ, ಅನಧಿಕೃತ ನಿವೇಶನಗಳಿಗೆ ’ಬಿ’ ಖಾತಾಗಳನ್ನು ನೀಡುವಂತೆ ಸೂಚಿಸಿದರು.
ಅಭಿಯಾನದ ನಂತರವೂ ಅನಧಿಕೃತ ಬಡಾವಣೆಗಳು ರಾಜ್ಯದಲ್ಲಿ ಮತ್ತೆ ತಲೆ ಎತ್ತಿದರೆ, ಅದಕ್ಕೆ ಜಿಲ್ಲಾಧಿಕಾರಿ, ಮುಖ್ಯ ಅಧಿಕಾರಿ, ನಗರ ಯೋಜನಾ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.
ಸುದ್ದಿ ಜಾಹೀರಾತಿಗಾಗಿ-7411515737