ಚಿಕ್ಕಮಗಳೂರು: ಬೇಟೆಗಾರರ ಉರುಳಿಗೆ ಸಿಲುಕಿದ ಚಿರತೆ ಸಾವು..!

ಚಿಕ್ಕಮಗಳೂರು: ಬೇಟೆಗಾರರ ಉರುಳಿಗೆ ಸಿಲುಕಿದ ಚಿರತೆ – ಸಾವು ಬದುಕಿನ ನಡುವೆ ಹೋರಾಟ
Facebook
Twitter
LinkedIn
WhatsApp

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಚಿರತೆಯೊಂದು ಬೇಟೆಗಾರರು ಹಾಕಿದ ಉರುಳಿಗೆ  ಸಿಲುಕಿ ಮೃತಪಟ್ಟಿದೆ.

ಕಾಡುಹಂದಿ ಬೇಟೆಗೆ ಬೇಟೆಗಾರರು ಹಾಕಿದ್ದ ಉರುಳಿಗೆ ಗುರುವಾರ ರಾತ್ರಿಯೇ ಚಿರತೆ ಸಿಲುಕಿದೆ. ಶುಕ್ರವಾರ ಬೆಳಿಗ್ಗೆ ಗಮನಿಸಿದ ಸ್ಥಳೀಯರು, ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಚಿರತೆ ರಕ್ಷಣೆಗೆ ಪ್ರಯತ್ನಿಸಿದರು. 

ಶಿವಮೊಗ್ಗದಿಂದ ಅರಿವಳಿಕೆ ತಜ್ಞರನ್ನು ಕರೆಸಿ ರಕ್ಷಣೆ ಮಾಡಲು ಮುಂದಾದರು. ಅಷ್ಟರಲ್ಲಿ ಚಿರತೆ ಉಸಿರಾಟ ನಿಲ್ಲಿಸಿದ್ದು, ಮೃತಪಟ್ಟಿದೆ ಎಂದು ಅಧಿಕಾರಿಗಳು ಘೋಷಣೆ ಮಾಡಿದರು. ಉರುಳು ಬಿಡಿಸಿಕೊಳ್ಳುವ ಪ್ರಯತ್ನದಲ್ಲಿ ಸೊಂಟಕ್ಕೆ ಇಳಿದಿದ್ದ ಉರುಳು ಮತ್ತಷ್ಟು ಬಿಗಿಯಾಗಿ ಚಿರತೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದರು.

‘ಕಾಡು ಹಂದಿಗೆ ಹಾಕಿರುವ ಉರುಳಿಗೆ ಚಿರತೆ ಸಿಲುಕಿರುವ ಸಾಧ್ಯತೆ ಇದೆ. ಮೊದಲಿಗೆ ಕಾಫಿ ತೋಟದ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು. ಮರಣೋತ್ತರ ಪರೀಕ್ಷೆ ಬಳಿಕ ತನಿಖೆ ನಡೆಯಲಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸುದ್ದಿ ಜಾಹೀರಾತಿಗಾಗಿ- 7411515737