ಪೋಲಿಸರು ಸ್ವತ ವಾಹನದ‌‌‌ ಮೇಲೆ‌ ಪೋಲಿಸ್ ಎಂದು ಬರೆಸುವಂತಿಲ್ಲ:ಡಾ.ಜಿ ಪರಮೇಶ್ವರ್

ಪೋಲಿಸರು ಸ್ವತ ವಾಹನದ‌‌‌ ಮೇಲೆ‌ ಪೋಲಿಸ್ ಎಂದು ಬರೆಸುವಂತಿಲ್ಲ:ಡಾ.ಜಿ ಪರಮೇಶ್ವರ್
Facebook
Twitter
LinkedIn
WhatsApp

ಪೊಲೀಸ್ ಇಲಾಖೆಯ ಅಧಿಕಾರಿಗಳು ‌ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ. ಶ್ರವಣ ಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 561ಕ್ಕೆ ಲಿಖಿತ ಮೂಲಕ ಸಚಿವ ಡಾ. ಜಿ ಪರಮೇಶ್ವರ್​ ಉತ್ತರಿಸಿದ್ದಾರೆ.

ರಾಜ್ಯದ ಪೊಲೀಸ್​ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿದೆಯೇ ಎಂಬ ಶಾಸಕ ಸಿ.ಎನ್. ಬಾಲಕೃಷ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವರು
ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ‌ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಉತ್ತರ ನೀಡಿದ್ದಾರೆ.

ಹಾಗಿದ್ದಲ್ಲಿ, ಸ್ವಂತ ವಾಹನಗಳ ಮೇಲೆ ಪೊಲೀಸ್​ ಎಂದು ಬರೆಸಿಕೊಂಡು ಕೆಲ ಪೊಲೀಸ್​ ನೌಕರರು ಮತ್ತು ಅಧಿಕಾರಿಗಳು ಕಾನೂನಿನ ಉಲ್ಲಂಘನೆ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಬಂದಿದ್ದಲ್ಲಿ, ಇವರ ವಿರುದ್ಧ ಸರ್ಕಾರವು ತೆಗೆದುಕೊಂಡಿರುವ ಕ್ರಮಗೇಳನು? ಎಂಬ ಪ್ರಶ್ನೆಗೆ
ತಮ್ಮ ಸ್ವಂತ ವಾಹನಗಳ ಮೇಲೆ ಪೊಲೀಸ್ ಎಂದು ಬರೆಯಿಸಿಕೊಂಡಿರುವುದು ಗೃಹ ಇಲಾಖೆಯ ಗಮನಕ್ಕೆ ಬಂದಿದೆ. ಸ್ವಂತ ವಾಹನದ ಮೇಲೆ ಪೊಲೀಸ್ ಅಧಿಕಾರಿಗಳು ಹಾಗೂ ನೌಕರರು ಪೊಲೀಸ್ ಎಂದು ಬರೆಸಿದ್ದರೇ ಅವರ ವಿರುದ್ಧ 2022 ರ ಸರ್ಕಾರದ ಸುತ್ತೋಲೆ ಪ್ರಕಾರ ಕಾನೂನು ಕ್ರಮ ಆಗುತ್ತದೆ ಎಂದು ಗೃಹ ಸಚಿವ ಡಾ. ಜಿ‌.ಪರಮೇಶ್ವರ ಲಿಖಿತ ಉತ್ತರ ನೀಡಿದ್ದಾರೆ.