ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದೆ.
ಕೋಟ್ಯಂತರ ರೂ ಹಣ ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಡಿಸಿಸಿ ಬ್ಯಾಂಕ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಮಂಜುನಾಥ ಗೌಡ ಅವರನ್ನು ಎಸಿಬಿ ಬಂಧನ ಮಾಡಿತ್ತು.
ಆದರೆ ಚಾರ್ಜ್ ಶೀಟ್ ನಲ್ಲಿ ಮಂಜುನಾಥ್ ಗೌಡ ಹೆಸರನ್ನು ಕೈಬಿಡಲಾಗಿತ್ತು. ಬಳಿಕ ಇಡಿ ಇಸಿಐಆರ್ ದಾಖಲು ಮಾಡಿ ತನಿಖೆ ನಡೆಸಲು ಮುಂದಾಗಿತ್ತು.
ಇಡಿ ತನಿಖೆಗೆ ಮುಂದಾಗುತ್ತಿದ್ದಂತೆ ಮಂಜುನಾಥ್ ಗೌಡ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ಇಡಿ ಕಾನೂನು ಹೋರಾಟದ ಬಳಿಕ ಹೈಕೋರ್ಟ್ ತಡೆಯಾಜ್ಞೆ ತೆರವು ಮಾಡಿತ್ತು.
ಈಗಾಗಲೇ ಇಡಿ ಅಧಿಕಾರಿಗಳು ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ಕೆಲ ಅಧಿಕಾರಿಗಳ ಮನೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.