ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಹಾವಳಿ ತಡೆಗೆ ಕಾನೂನು ತರಲು ತೀರ್ಮಾನಿಸಲಾಗಿದ್ದು, ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಮಂಡ್ಯ ಜಿಲ್ಲಾ ಪೊಲೀಸ್ ಘಟಕದ ಪ್ರಗತಿ ಪರಿಶೀಲನೆಗೆ ಅಗಮಿಸಿದ್ದ ವೇಳೆ ಮಾತನಾಡಿದ ಅವರು, ಬಂಡವಾಳ ಹೂಡಿಕೆ ಮತ್ತು ಜಿಎಸ್‌ಟಿ ಪಾವತಿಸುವುದರಲ್ಲಿ ದೇಶದಲ್ಲೇ ರಾಜ್ಯ ಎರಡನೇ ಸ್ಥಾನದಲ್ಲಿದ್ದು, ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ ಎಂದು ಹೇಳಿದರು. ಐದು ಗ್ಯಾರಂಟಿ ಯೋಜನೆಗಳಿಗೆ ಆಯವ್ಯಯನಲ್ಲಿ ಹಣ ಮೀಸಲಿಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಗ್ಯಾರಂಟಿ ಯೋಜನೆಯಿಂದ ಯಾವುದಾದರು ಅಭಿವೃದ್ಧಿ ಕಾರ್ಯಗಳು ನಿಂತಿವೆಯೇ ಎಂದು ಪ್ರಶ್ನಿಸಿದ ಅವರು, ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಹೋರಾಟ ಒಂದು ವಿಪರ್ಯಾಸ ಎಂದು ಪ್ರತಿಕ್ರಿಯಿಸಿದರು.