ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7:30ಕ್ಕೆ ಆರಂಭವಾಗಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರು ಪಂದ್ಯ ಗೆದ್ದು, ಉತ್ತಮ ಆರಂಭ ಮಾಡಿದೆ. ಇಂದು ತವರಿನಲ್ಲಿ ಗೆಲುವಿನ ಖಾತೆ ತೆರೆಯುವ ತವಕದಲ್ಲಿದೆ.
ಕ್ರಿಕೆಟ್ ಪಂದ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸೇವೆಯ ಸಮಯವನ್ನು ರಾತ್ರಿ 12.30ರ ವರೆಗೆ ವಿಸ್ತರಿಸಲಾಗಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 1.15ಕ್ಕೆ ಹೊರಡಲಿದೆ.
ಬಿಎಂಟಿಸಿಯಿಂದಲೂ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.