ಶಿವಮೊಗ್ಗ: ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿ ಕುರಿತಂತೆ ಮೇ 5 ರಿಂದ 21 ವರೆಗೆ ಜಿಲ್ಲೆಯಲ್ಲಿ ಗಣತಿದಾರರು ಮನೆ-ಮನೆಗೆ ತೆರಳಿ ಸಮೀಕ್ಷೆ ಕಾರ್ಯ ನಡೆಸಲಿದ್ದು ಈ ಸಮೀಕ್ಷೆಯಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿಯ ಸಮುದಾಯದವರು ತಮ್ಮ ಮೂಲಜಾತಿಯನ್ನು ತಿಳಿಸಬಹುದಾಗಿದ್ದು, ಸಮೀಕ್ಷಾ ಕಾರ್ಯಕ್ಕೆ ಎಲ್ಲರೂ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕೋರಿದ್ದಾರೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತಂತೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ ದಾಸ್ ರವರ ಏಕಸದಸ್ಯ ವಿಚಾರಣಾ ಆಯೋಗ ರಚಿಸಿದ್ದು, ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಶೇಖರಿಸಲು ಸಮೀಕ್ಷೆ ನಡೆಸಲಾಗುವುದು. ಅದರಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಸಮೀಕ್ಷೆ ನಡೆಯಲಿದ್ದು ಸಮೀಕ್ಷೆ ವೇಳೆ ಗಣತಿದಾರರಿಗೆ ಸಹಕರಿಸಬೇಕೆಂದು ಅವರು ತಿಳಿಸಿದ್ದಾರೆ.